ಸಭೆ

ಹೆಬ್ಬಾಲೆಯಲ್ಲಿ ನಡೆದ ಶಿಕ್ಷಕರ ಸನ್ಮಾನ ಕಾರ್ಯಕ್ರಮ

ಕುಶಾಲನಗರ, ಸೆ 10: ವಿದ್ಯಾವರ್ಧಕ ಸಂಘ ಹೆಬ್ಬಾಲೆ, ಹಿರಿಯ ವಿದ್ಯಾರ್ಥಿಗಳ ಸಂಘ ಹೆಬ್ಬಾಲೆ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಹೆಬ್ಬಾಲೆ ಘಟಕ ಸಂಯುಕ್ತಾಶ್ರಯದಲ್ಲಿ ಶಿಕ್ಷಕ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹೆಬ್ಬಾಲೆ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ನಿವೃತ್ತ ಕಸ್ಟಮ್ ಅಧಿಕಾರಿ ಹೆಚ್‍.ಡಿ. ನೀಲಕಂಠರಾಯ ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಮೆಲಕು ಹಾಕಿದರು.
ಆರ್. ಆರ್. ಕನ್ಸ್ಟ್ರಕ್ಷನ್ಸ್ ಮಾಲಿಕರು ಹಾಗೂ ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾದ ಆರ್. ಆರ್. ಕುಮಾರ್ ಮಾತನಾಡಿ, ಸಂಸ್ಥೆಯಲ್ಲಿ ಅಪೂರ್ಣಗೊಂಡಿರುವ ಸಭಾ ಭವನವನ್ನು ಪೂರ್ಣ ಗೊಳಿಸಿಕೊಡುವುದಾಗಿ ಭರವಸೆಯನ್ನು ನೀಡಿದರು.
ಹಿರಿಯ ಸಾಹಿತಿ ಹಾಗೂ ಸಂಸ್ಥೆಯ ವಿದ್ಯಾರ್ಥಿಯೂ ಆದಂತಹ ಭಾರದ್ವಾಜ್ ಆನಂದತೀರ್ಥರವರು ಸರ್ವಪಲ್ಲಿ ರಾಧಾಕೃಷ್ಣನ್ ರವರ ಆಶಯವನ್ನು ವಿವರಿಸಿದರು.
ನಂತರ ಉಪನ್ಯಾಸಕರು ಹಾಗೂ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಹಿರಿಯ ವಿದ್ಯಾರ್ಥಿ ಮಾಜಿ ಸೈನಿಕರೂ ಆದ ಹೆಚ್.ಎನ್ ಪುಟ್ಟೇಗೌಡರು ಮಾತನಾಡುತ್ತಾ ಸೈನ್ಯಕ್ಕೆ ಸೇರುವ ಆಸಕ್ತಿ ಇರುವಂತಹ ವಿದ್ಯಾರ್ಥಿಗಳಿಗೆ ಅಗ್ನಿಪಥ್ ಯೋಜನೆಯ ಮಹತ್ವವನ್ನು ತಿಳಿಸಿದರು.
ವಿದ್ಯಾರ್ಥಿಗಳಿಗೆ ಶರಣ ಸಾಹಿತ್ಯ ಪರಿಷತ್ತಿನ ಸ್ಥಾಪನೆಯ ಉದ್ದೇಶ ಹಾಗೂ ಕದಲಿ ವೇದಿಕೆಯ ಮಹತ್ವವನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹದೇವಪ್ಪ ತಿಳಿಸಿಕೊಟ್ಟರು.
ಸಂಯುಕ್ತ ಪದವಿ ಪೂರ್ವ ಕಾಲೇಜು ಹೆಬ್ಬಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಎಚ್.ಎಲ್. ರಮೇಶ್,
ಕನ್ನಡ ಸಾಹಿತ್ಯ ಪರಿಷತ್ತು ಹೆಬ್ಬಾಲೆ ಘಟಕದ ಅಧ್ಯಕ್ಷರಾದ ಮೂರ್ತಿ,
ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಶಿವಪ್ಪ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!