ಪ್ರಕಟಣೆ

ವಿರಾಜಪೇಟೆ ಗಣೇಶ ವಿಸರ್ಜನೆ: ಸೆ.25 ರಿಂದ ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಮಡಿಕೇರಿ ಸೆ.21:-ವಿರಾಜಪೇಟೆ ನಗರದಲ್ಲಿ ಈಗಾಗಲೇ ಪ್ರತಿಷ್ಠಾಪಿಸಲಾಗಿರುವ ಗಣಪತಿ ಮೂರ್ತಿಗಳ ವಿಸರ್ಜನೆ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ (5)ರಲ್ಲಿ ದತ್ತವಾದ ಅಧಿಕಾರದಂತೆ ಸೆಪ್ಟೆಂಬರ್, 25 ರ ಮಧ್ಯಾಹ್ನ 2 ಗಂಟೆ ಯಿಂದ ಸೆಪ್ಟೆಂಬರ್, 26 ರ ಬೆಳಗ್ಗೆ 10 ಗಂಟೆ ವರೆಗೆ ವಿರಾಜಪೇಟೆ ನಗರದಲ್ಲಿ ವಾಹನ ಸಂಚಾರ ವ್ಯವಸ್ಥೆ ನಿರ್ವಹಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.
ಮಾರ್ಗ ಬದಲಾವಣೆ ವಿವರ: ಪೆರುಂಬಾಡಿ ಕಡೆಯಿಂದ ವಿರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ಕೀರ್ತಿ ರೆಸ್ಟೋರೆಂಟ್ ಮುಂಭಾಗದಿಂದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದ ಬದಿಯಲ್ಲಿ ಮಾತ್ರ ನಿಲ್ಲಿಸುವುದು. ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್ ಪೆÇೀಸ್ಟ್, ಬಾಳುಗೋಡು, ಬಿಟ್ಟಂಗಾಲ ಜಂಕ್ಷನ್, ಕೈಕೇರಿ ಜಂಕ್ಷನ್, ಗದ್ದೆ ಮನೆಯ ರಸ್ತೆ ಜಂಕ್ಷನ್ ಮಾರ್ಗವಾಗಿ ಪಾಲಿಬೆಟ್ಟ, ಸಿದ್ದಾಪುರಕ್ಕೆ ಹೋಗುವುದು. ಅದೇ ರೀತಿ ಸಿದ್ದಾಪುರ ಕಡೆಯಿಂದ ಕೇರಳದ ಕಡೆ ಹೋಗುವ ವಾಹನಗಳು ಕೈಕೇರಿ, ಬಿಟ್ಟಂಗಾಲ, ಬಾಳುಗೋಡ, ಪೆರುಂದಾಡಿ ಮಾರ್ಗವಾಗಿ ಕೇರಳದ ಕಡೆ ಹೋಗುವುದು.
ಮಡಿಕೇರಿಯಿಂದ ಕೇರಳದ ಕಡೆಗೆ ಹೋಗುವ ವಾಹನಗಳು ಮೂರ್ನಾಡು, ಕೊಂಡಂಗೇರಿ,ಅಮ್ಮತ್ತಿ, ಪಾಲಿಬೆಟ್ಟ, ಕೈಕೇರಿ, ಬಿಟ್ಟಂಗಾಲ, ಬಾಳುಗೋಡು, ಪೆರಂಬಾಡಿ, ಮಾಕುಟ್ಟ ಮಾರ್ಗವಾಗಿ ಹೋಗುವುದು. ಕೇರಳದ ಕಡೆಯಿಂದ ಮಡಿಕೇರಿಗೆ ಹೋಗುವ ವಾಹನಗಳು ಪೆರುಂಬಾಡಿ, ಬಿಟ್ಟಂಗಾಲ ಮಾರ್ಗವಾಗಿ ಕೈಕೇರಿ-ಪಾಲಿಬೆಟ್ಟ ಮೂರ್ನಾಡು ಮಾರ್ಗವಾಗಿ ಮಡಿಕೇರಿಗೆ ಹೋಗುವುದು. ಮಡಿಕೇರಿ ಕಡೆಯಿಂದ ಗೋಣಿಕೊಪ್ಪ ಮುಖಾಂತರ ಮೈಸೂರು, ಬೆಂಗಳೂರಿಗೆ ಹೋಗುವ ವಾಹನಗಳು ಮೂರ್ನಾಡು, ಕೊಂಡಂಗೇರಿ ಅಮ್ಮತ್ತಿ, ಪಾಲಿಬೆಟ್ಟ-ಕೈಕೇರಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರು, ಬೆಂಗಳೂರಿಗೆ ಹೋಗುವುದು. ಸಿದ್ದಾಪುರ ಕಡೆಯಿಂದ ಮೆರವಣಿಗೆ ನೋಡಲು ವಿರಾಜಪೇಟೆಗೆ ಬರುವ ವಾಹನಗಳು ಮಗ್ಗುಲ ಜಂಕ್ಷನ್ (ಡೆಂಟಲ್ ಕಾಲೇಜ್ ಜಂಕ್ಷನ್) ಮತ್ತು ರವಿರಾಜ್ ಗ್ಯಾಸ್ ಏಜೆನ್ಸಿ ಕಚೇರಿಯಿಂದ ಐಮಂಗಲ ಕಡೆಗೆ ಹೋಗುವ ರಸ್ತೆಯ ಎಡಬದಿಯಲ್ಲಿ ವಾಹನ ನಿಲುಗಡೆ ಮಾಡಬೇಕು.
ಗೋಣಿಕೊಪ್ಪ ಕಡೆಯಿಂದ ಮೆರವಣಿಗೆ ನೋಡಲು ಬರುವಂತಹ ವಾಹನ ಪಂಜರುಪೇಟೆಯ ಸರ್ವೋದಯ ಕಾಲೇಜಿನ ಬಳಿಯಿಂದ ಕಾವೇರಿ ಕಾಲೇಜು ಕಡೆಗೆ ಎಡಬದಿಯಲ್ಲಿ ಮಾತ್ರ ನಿಲ್ಲಿಸತಕ್ಕದ್ದು. ಬೇಟೋಳಿ, ಗುಂಡಿಗೆರೆ, ಚಿಟ್ಟಡೆ ಕಡೆಯಿಂದ ಮಹಿಳಾ ಸಮಾಜ ಮಾರ್ಗವಾಗಿ ಮೆರವಣಿಗೆ ನೋಡಲು ಬರುವಂತಹ ವಾಹನಗಳು ಮಹಿಳಾ ಸಮಾಜ ರಸ್ತೆಯ ಎಡಬದಿಯಲ್ಲಿ ವಾಹನ ನಿಲುಗಡೆ ಮಾಡಬೇಕು.
ಮೈಸೂರು, ಬೆಂಗಳೂರು ಕಡೆಯಿಂದ ಮಡಿಕೇರಿಗೆ ಹೋಗುವ ವಾಹನಗಳು ಗೋಣಿಕೊಪ್ಪ, ಸಿದ್ದಾಪುರ ಮಾರ್ಗವಾಗಿ ಮಡಿಕೇರಿ ಹೋಗುವುದು, ಒಂಟಿಯಂಗಡಿ, ಚೆಂಬೆಬೆಳ್ಳೂರು ಮಾರ್ಗವಾಗಿ ವಿರಾಜಪೇಟೆ ನಗರಕ್ಕೆ ಗಣೇಶ ವಿಸರ್ಜನೆ ಮೆರವಣಿಗೆ ನೋಡಲು ಬರುವ ವಾಹನಗಳು ಕೊಡವ ಸಮಾಜ ಜಂಕ್ಷನ್ ನಿಂದ ಚೆಂಬೆಬೆಳ್ಳೂರುಗೆ ಹೋಗುವ ರಸ್ತೆಯ ಎಡಭಾಗದಲ್ಲಿ ನಿಲ್ಲಿಸತಕ್ಕದ್ದು. ಮಡಿಕೇರಿ ಕಡೆಯಿಂದ ವಿರಾಜಪೇಟೆ ಗಣೇಶ ವಿಸರ್ಜನೆ ಮೆರವಣಿಗೆ ನೋಡಲು ಬರುವ ವಾಹನಗಳು ಕೊಡವ ಸಮಾಜ ಜಂಕ್ಷನ್ ನಿಂದ ಚೆಂಬೆಬೆಳ್ಳೂರುಗೆ ಹೋಗುವ ರಸ್ತೆಯ ಎಡಭಾಗದಲ್ಲಿ ನಿಲುಗಡೆ ಮಾಡಬೇಕು.
ಸೆಪ್ಟೆಂಬರ್, 25 ರಂದು ಮಧ್ಯಾಹ್ನ 2 ಗಂಟೆಯಿಂದ ಸೆಪ್ಟೆಂಬರ್, 26 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರದ ತೆಲುಗರ ಬೀದಿ, ದೊಡ್ಡಟ್ಟಿ ವೃತ್ತ, ಅಪ್ಪಯ್ಯ ಸ್ವಾಮಿ ರಸ್ತೆ, ದಖ್ಖನಿ ಮೊಹಲ್ಲಾ ರಸ್ತೆ, ಅರಸು ನಗರ ರಸ್ತೆ, ಎಫ್.ಎಂ.ಸಿ. ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಗೌರಿಕೆರೆ ರಸ್ತೆ, ಮೀನುಪೇಟೆ ರಸ್ತೆಯ ವಿರಾಜಪೇಟೆ ತಾಲೂಕು ತಹಶೀಲ್ದಾರರ ಕಚೇರಿ ವರೆಗೆ ಹಾಗೂ ದೊಡ್ಡಟ್ಟಿ ವೃತ್ತದಿಂದ ಪಂಜರುಪೇಟೆ ಸರ್ವೋದಯ ಕಾಲೇಜಿನವರೆಗೆ ಹಾಗೂ ಮಗ್ಗುಲ ಜಂಕ್ಷನ್‍ನಿಂದ ದಖ್ಖನಿ ಮೊಹಲ್ಲಾ ಜಂಕ್ಷನ್‍ವರೆಗೆ ಯಾವುದೇ ವಾಹನಗಳು ಓಡಾಡದಂತೆ ಮತ್ತು ವಾಹನ ನಿಲುಗಡೆ ನಿμÉೀಧಿಸುವುದು.
ಈ ಸಂಚಾರ ನಿಯಮಗಳಿಗೆ ಏನಾದರೂ ವ್ಯತ್ಯಾಸ ಅಥವಾ ಮಾರ್ಪಾಡು ಇದ್ದರೆ ಆಯಾಯ ಸ್ಥಳದಲ್ಲಿ ಇರುವ ಪೆÇಲೀಸರು ನೀಡುವ ನಿರ್ದೇಶನದಂತೆ ನಡೆದುಕೊಳ್ಳುವುದು. ಇದರೊಂದಿಗೆ ಸನ್ನಿವೇಶಕ್ಕೆ ತಕ್ಕಂತೆ ಅವಶ್ಯಕತೆ ಇದ್ದರೆ, ಸಣ್ಣ ಪುಟ್ಟ ಮಾರ್ಪಾಡು ಮಾಡಲು ಪೆÇಲೀಸ್ ಅಧಿಕಾರಿಗಳಿಗೆ ಅನುಮತಿಸಿದೆ.
ಈ ಬಗ್ಗೆ ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 116 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(2) ರಂತೆ ಅವಶ್ಯವಿರುವ ಸಂಜ್ಞೆ ಸೂಚನಾ ಫಲಕವನ್ನು ಅಳವಡಿಸಲು ಪೆÇಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅಧಿಕಾರ ನೀಡಿದೆ.
ಈ ವಾಹನ ಸಂಚಾರ ನಿಯಮವು ಸೆಪ್ಟೆಂಬರ್, 25 ರ ಮಧ್ಯಾಹ್ನ 2 ಗಂಟೆಯಿಂದ ಸೆಪ್ಟೆಂಬರ್, 26 ರ ಬೆಳಗ್ಗೆ 10 ಗಂಟೆಯವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!