ಸುಂಟಿಕೊಪ್ಪ, ಸೆ 24 -ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26 ನೇ ಸಾಲಿನಲ್ಲಿ ರೂ 59,53,671 ನಿವ್ವಳ ಲಾಭವನ್ನು ಗಳಿಸಿದೆ ಎಂದು ವಾರ್ಷಿಕ ಸಭೆಯಲ್ಲಿ ಸಂಘದ ಅಧ್ಯಕ್ಷ ಜೆರ್ಮಿ ಡಿಸೋಜ ಮಾಹಿತಿ ನೀಡಿದರು.
ಶನಿವಾರ ದಂದು ಇಲ್ಲಿನ ಗುಂಡುಗುಟ್ಟಿ ಮಂಜನಾಥಯ್ಯ ಸಹಕಾರ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಜೆರ್ಮಿ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಾರ್ಷಿಕ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದ ಜೆರ್ಮಿಡಿಸೋಜ ಅವರು ಸಂಘದ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. ಸಂಘದ ಸದಸ್ಯರಿಗೆ 2025-26 ನೇ ಸಂಘದಲ್ಲಿ 1999 ಮಂದಿ ಸದಸ್ಯರಿದ್ದು, ಇದರಲ್ಲಿ ಎ ಸದಸ್ಯರ ಪಾಲು ಹಣ 86,272,280 ಸರ್ಕಾರದ ಪಾಲು ಹಣ ರೂ.78,000 ಆಗಿರುತ್ತದೆ ಎಂದು ಮಾಹಿತಿ ನೀಡಿದರು.
ಸಂಘದ ಸಾಲ ಮರುಪಾವತಿ ಪ್ರಮಾಣವು ಶೇ.98.50 ಇದ್ದು, ಸರಕಾರದ ಬಡ್ಡಿ ರಿಯಾಯಿತಿ ಯೋಜನೆಯು ಜಾರಿಯಲ್ಲಿರುತ್ತದೆ ಎಂದು ಮಾಹಿತಿ ನೀಡಿದರು.
ಅಧ್ಯಕ್ಷರ ಮಾತುಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಚಂದ್ರಶೇಖರ್ ಅವರು ಸಂಘದ ಸದಸ್ಯರ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರ ಪ್ರತಿಭಾ ಪುರಸ್ಕಾರದಿಂದ ವಂಚಿತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ಪಡೆಯುವ ಎಲ್ಲಾ ಮಕ್ಕಳಿಗೂ ಮೊದಲ ಮೂರು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಬೇಕೆಂದು ಆಗ್ರಹಿಸಿದರು. ಅವರ ಮಾತಿಗೆ ಸದಸ್ಯರಾದ ಬಿ.ಜಿ.ಜವಹರ್, ಕರುಣ ಮತ್ತಿತರ ಸದಸ್ಯರು ಧ್ವನಿಗೂಡಿಸಿದರು. ಈ ಹಿನ್ನಲೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ಸರಕಾರಿ ಕಾಲೇಜುಗಳಲ್ಲಿ ಪದವಿ ವ್ಯಾಸಂಗ ಮೊದಲ 2 ಸ್ಥಾನ ಪಡೆಯುವ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ತೀರ್ಮಾನಿಸಲಾಯಿತು. ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹಕ ಬಹುಮಾನವನ್ನು ನೀಡಿದರು.ವಿಶೇಷವಾಗಿ ಸಹಕಾರ ರತ್ನ ಎಂ.ಎನ್.ಕೊಮರಪ್ಪ ಅವರ 4 ದಶಕಗಳ ಸಹಕಾರಿ ಸೇವೆಯನ್ನು ಸಂಘದ ಮಾಜಿ ಅಧ್ಯಕ್ಷ ಎನ್.ಸಿ. ಕ್ಲೈವ ಪೊನ್ನಪ್ಪ ಮಾತನಾಡಿದರು.
ಸಭೆಯಲ್ಲಿಉಪಾಧ್ಯಕ್ಷರಾದಪಿ.ಪಿ.ಉದಯಕುಮಾರ್,ನಿರ್ದೇಶಕರುಗಳಾದಎನ್.ಸಿಪೊನ್ನಪ್ಪ,ಡಿ.ಬಿ.ರಮೇಶ್‌ಚಂಗಪ್ಪ,ಕೆ.ಎಸ್. ಮಂಜುನಾಥ್,ಡಿ.ಕೆ. ಗಂ ಗಾಧರ,ಡಾ.ಶಶಿಕಾಂತರೈ, ಕೆ.ಪಿ.ಜಗನ್ನಾಥ್, ಕೆ.ಆರ್.ಮಂಜುನಾಥ, ಡಿ.ಎಚ್.ಚಂದ್ರಶೇಖರ್, ಬಿ.ಕೆ.ದಯಾನಂದ, ಪಿ.ಪಿ.ಲೀಲಾವತಿ, ಕೆ.ವಿ.ರಮ್ಯ, ಮತ್ತು ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮಿತ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮೊದಲಿಗೆ ಅಕ್ಷತಾ ಯೋಗೇಶ್ ಪ್ರಾರ್ಥಿಸಿ, ಮಾಜಿ ಅಧ್ಯಕ್ಷ ಕೆ.ಎಸ್.ಮಂಜುನಾಥ್ ಸ್ವಾಗತಿಸಿ, ಪ ನಿರ್ದೇಶಕ ಡಾ.ಶಶಿಕಾಂತ ರೈ ನಿರೂಪಿಸಿ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಮಿತ್ರ ವಂದಿಸಿದರು.
Back to top button
error: Content is protected !!