ನಂಜರಾಯಪಟ್ಟಣ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಕುಶಾಲನಗರ, ಸೆ 25: ನಂಜರಾಯಪಟ್ಟಣ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ನೂತನ ಅಧ್ಯಕ್ಷ ಹೆಚ್.ಆರ್.ಪ್ರಸನ್ನಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಆವರಣದಲ್ಲಿ ನಡೆಯಿತು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಾಲಾರ್ಪಣೆ ಮಾಡಿ ಸ್ವಾಗತ ಕೋರಲಾಯಿತು.
ಹಾಸನ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ವೀಣಾ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಸಂಘದ ಚಟುವಟಿಕೆ ಜಮಾ ಖರ್ಚು,ಲಾಭ ನಷ್ಟದ ಸಂಪೂರ್ಣ ಮಾಹಿತಿಯನ್ನು ಸಭೆಗೆ ಒದಗಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ಸರ್ವ ಸದಸ್ಯರ ಸಹಕಾರದಿಂದ ಸಂಘದ ಉತ್ತಮವಾಗಿ ಮುನ್ನಡೆಯುತ್ತಿದೆ. ಮುಂದೆಯೂ ಕೂಡ ಸಂಘದ ಮತ್ತಷ್ಟು ಅಭಿವೃದ್ಧಿಗೆ ಸದಸ್ಯರು ಅಗತ್ಯ ಸಹಕಾರ ಅತಿಮುಖ್ಯ ಎಂದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕೆ.ಜಿ.ಲೋಕನಾಥ್, ನಿರ್ದೇಶಕರಾದ ಕೆ.ಎಸ್.ಸುರೇಶ್, ವೇಲಾಯುಧ, ವಿ.ಹೆಚ್.ಸುಭಾಷ್, ಹೆಚ್.ಎ.ಸತೀಶ್, ಪಿ.ಎನ್.ಕುಸುಮಾ, ಸಿ.ವಿ.ಪುಷ್ಪಾವತಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ಹರಿಣಿ ಸರ್ವರನ್ನು ಸ್ವಾಗತಿಸಿ, ವಂದಿಸಿದರು.



