ಸಭೆ

ಕರ್ನಾಟಕ ರಕ್ಷಣಾ ವೇದಿಕೆ ಸಭೆ: ಸದಸ್ಯರ ಸೇರ್ಪಡೆ

ಕುಶಾಲನಗರ, ಸೆ 27: ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಸಭೆ ಜಿಲ್ಲಾಧ್ಯಕ್ಷ ಡಾ.ಬಿ.ಎ.ದಿನೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಸಭೆಯಲ್ಲಿ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಪ್ರಮಾಣಪತ್ರ ಹಸ್ತಾಂತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ, ಸಂಘಟನೆ ತೊರೆದಿದ್ದ ಕೆಲವರು ಮತ್ತೆ ನಮ್ಮ‌ ಸಂಘಕ್ಕೆ ಮರಳಿದ್ದಾರೆ. ಇದರೊಂದಿಗೆ ಹೊಸ‌ ಸದಸ್ಯರು ಕೂಡ ನಮ್ಮ ಸಂಘಟನೆಯತ್ತ ಮುಖ‌ ಮಾಡಿದ್ದಾರೆ. ಇದರೊಂದಿಗೆ ಮುಂದಿನ ಹೋರಾಟಗಳ‌ ಬಗ್ಗೆ ಕೂಡ ಚರ್ಚಿಸಲಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯ ಪರಿಹಾರ ದೊರಕಿಸುವ‌ ನಿಟ್ಟಿನಲ್ಲಿ ನಮ್ಮ‌ ಸಂಘಟನೆ‌ ಶ್ರಮವಹಿಸಲಿದೆ ಎಂದು ತಿಳಿಸಿದರು.
ಈ ಸಂದರ್ಭ ಜಿಲ್ಲಾ ಸಂಚಾಲಕ ಎಂ.ಎಸ್. ಮಣಿಕಂಠ, ಜಿಲ್ಲಾ ಗೌರವಾಧ್ಯಕ್ಷ ನಾಗರಾಜ ಕಾವಲ್ ಕೊಂಡ, ಜಿಲ್ಲಾ ಗೌರವಾಧ್ಯಕ್ಷ ಸಲೀನಾ ಪೆದ್ರು, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ನೆಲ್ಲಿದಿಕೇರಿ, ನಿರ್ಮಲಾ ಮತ್ತು ಸುಶೀಲಾ, ಜಿಲ್ಲಾ ಕಾರ್ಯದರ್ಶಿ ಸರಳಾ ರಾಮಣ್ಣ, ಸತೀಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅರುಣ್ ಕುಮಾರ್, ಗೌರವಾಧ್ಯಕ್ಷ ನಾಗರಾಜ್,ಪ್ರಧಾನ ಕಾರ್ಯದರ್ಶಿ ತಾಜುನ್ನೀಸಾ, ಉಪಾಧ್ಯಕ್ಷೆ ತನುಜಾವತಿ, ಕುಶಾಲನಗರ ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಕಮಾಲುದ್ದೀನ್,
ಗೌರವಾಧ್ಯಕ್ಷೆ ಪುಟ್ಟಮ್ಮ, ಪ್ರಧಾನ ಕಾರ್ಯದರ್ಶಿ ಗಣೇಶ್ ಮಾಸ್ಟರ್,
ಬಾವ ಮಾಲ್ದಾರೆ, ಕಾರ್ಯದರ್ಶಿ ಸುಂದರೇಶ್, ಜಂಟಿ ಕಾರ್ಯದರ್ಶಿ ಕಾರ್ತಿಕ್,‌ಮಾಧ್ಯಮ ವಕ್ತಾರ ಭರತ್ ಉಳುವಾರನ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!