ಕಾರ್ಯಕ್ರಮ
ಕುಶಾಲನಗರ ಕೊಡವ ಸಮಾಜದ ವತಿಯಿಂದ ಕೈಲ್ ಪೊಳ್ದ್ ಸಂತೋಷ ಕೂಟ

ಕುಶಾಲನಗರ, ಸೆ 27: ಕುಶಾಲನಗರ ಕೊಡವ ಸಮಾಜದ ವತಿಯಿಂದ ಕೈಲ್ ಪೊಳ್ದ್ ಸಂತೋಷ ಕೂಟ ಸಮಾಜದ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ
ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಮಂಡುವಂಡ ಪಿ ಮುತ್ತಪ್ಪ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು.
ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುಂಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂತೋಷ ಕೂಟದ ಅಂಗವಾಗಿ
ಸಮಾಜದ ಆವರಣದಲ್ಲಿ ಸಮಾಜ ಬಾಂಧವರಿಗೆ ವಿವಿದ ಆಟೋಟ ಸ್ಪರ್ಧೆಗಳು ನಡೆದವು.
ಸಮಾಜದ ಉಪಾಧ್ಯಕ್ಷ ಪುಲಿಯಂಡ ಚಂಗಪ್ಪ, ಕಾರ್ಯದರ್ಶಿ ಅಯಿಲಪಂಡ ಸಂಜು ಬೆಳ್ಳಿಯಪ್ಪ ವೇದಿಕೆಯಲ್ಲಿದ್ದರು.



