ಕಾರ್ಯಕ್ರಮ

ಮೈಸೂರಿನಲ್ಲಿ ನಡೆದ ವಿಜ್ಞಾನ ಸಮ್ಮೇಳನ: ವಿಜ್ಞಾನ ಕಾರ್ಯಕರ್ತರಿಗೆ ಸನ್ಮಾನ

ಕುಶಾಲನಗರ, ಸೆ.11:ಕರ್ನಾಟಕ ವಿಜ್ಞಾನ & ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ( ಕೆ- ಸ್ಟೆಪ್ ) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೇಂದ್ರ ಸಮಿತಿ
ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ‌ದ ಸಂಯುಕ್ತಾಶ್ರಯದಲ್ಲಿ
ಮೈಸೂರಿನಲ್ಲಿ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಭಾಂಗಣದಲ್ಲಿ
ನಡೆದ ಮೂರು ದಿನಗಳ ಕಾಲದ‌ 14 ನೇ ಅಖಿಲ ಕರ್ನಾಟಕ ವಿಜ್ಞಾನ ಸಮ್ಮೇಳನ: 2022 ವು ಸೆ.10 ( ಶನಿವಾರ) ರಂದು
ಸಮಾಪನಗೊಂಡಿತು.
ಮೂರು ದಿನಗಳ ಕಾಲ ನಡೆದ ವಿಜ್ಞಾನ ಸಮ್ಮೇಳನದಲ್ಲಿ ತಜ್ಞರು
ವಿವಿಧ ವಿಜ್ಞಾನ ಗೋಷ್ಠಿಗಳನ್ನು ನಡೆಸಿಕೊಟ್ಟರು.
ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ( ಕ.ರಾ.ವಿ.ಪ.) ವತಿಯಿಂದ ಕ.ರಾ.ವಿ.ಪ.ವಿಜ್ಞಾನ ಪರಿಷತ್ತಿನ ಎಲ್ಲಾ ಜಿಲ್ಲಾ ಸಮಿತಿಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕೊಡಗು ಜಿಲ್ಲೆಯಲ್ಲಿ ಶಾಲಾ-ಕಾಲೇಜು ಹಾಗೂ ಸಮುದಾಯದಲ್ಲಿ ಕಳೆದ 26 ವರ್ಷಗಳಿಂದ ಶಿಕ್ಷಣ ಇಲಾಖೆಯ ಮೂಲಕ ವಿಜ್ಞಾನ ಕಾರ್ಯಕ್ರಮಗಳು/ ಚಟುವಟಿಕೆಗಳನ್ನು ನಿರಂತರವಾಗಿ ಸಂಘಟಿಸಿಕೊಂಡು ಬರುತ್ತಿರುವ ವಿಜ್ಞಾನ ಕಾರ್ಯಕರ್ತರಾದ
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ ಜಿ.ಪ್ರೇಮಕುಮಾರ್ ಹಾಗೂ ಸಮಿತಿಯ ಕಾರ್ಯದರ್ಶಿಯೂ ಆದ ಗೋಣಿಕೊಪ್ಪಲು ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಡಿ.ಕೃಷ್ಣಚೈತನ್ಯ ಅವರನ್ನು ವಿಜ್ಞಾನ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಜನವಿಜ್ಞಾನ ಚಳುವಳಿಯ ಅನುಭವಗಳು ಕುರಿತು ನಡೆದ ವಿಜ್ಞಾನ ಗೋಷ್ಠಿಯಲ್ಲಿ ಭಾಗವಹಿಸಿದ್ದ ಟಿ.ಜಿ.ಪ್ರೇಮಕುಮಾರ್, ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರಗಳ ವಿರುದ್ಧ ಜನಜಾಗೃತಿ ಮೂಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಪ್ರಜ್ಞೆ ಬೆಳೆಸಲು ಶಿಕ್ಷಕರು ಪ್ರಯತ್ನಿಸಬೇಕಿದೆ ಎಂದರು.
ಸಾಗರದಲ್ಲಿ ಪ್ಲಾಸ್ಟಿಕ್ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಸಮಿತಿಯ ಕಾರ್ಯದರ್ಶಿ ಡಿ.ಕೃಷ್ಣಚೈತನ್ಯ ಮಾತನಾಡಿ, ನಾವು ಪ್ಲಾಸ್ಟಿಕ್ ಗೆ ಪರ್ಯಾಯವಾಗಿ ಪರಸ್ಪರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡುವ ಮೂಲಕ ಮಾಲಿನ್ಯ ತಡೆಗಟ್ಟಬೇಕು ಎಂದರು.
ಸಮ್ಮೇಳನಾಧ್ಯಕ್ಷರಾಗಿದ್ದ
ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಮಾತನಾಡಿ, ನಾವು ಭವಿಷ್ಯತ್ತಿನ ದೃಷ್ಟಿಯಿಂದ ಭೂಮಿಯನ್ನು ಸಂರಕ್ಷಿಸಲು ಸಂಘಟಿತ ಪ್ರಯತ್ನ ಅಗತ್ಯ ಎಂದರು.
ವಿಜ್ಞಾನ ಪರಿಷತ್ತಿನ ರಾಜ್ಯ ಸಮಿತಿಯ ಅಧ್ಯಕ್ಷ ಗಿರೀಶ್ ಕಡ್ಲೆವಾಡ, ಗೌರವ ಕಾರ್ಯದರ್ಶಿ ಸಿ.ಕೃಷ್ಣೇಗೌಡ, ಕೋಶಾಧಿಕಾರಿ ಈ.ಬಸವರಾಜು, ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಎಂ.ಇ.ಮೊಹಿದ್ದೀನ್, ಕೋಶಾಧಿಕಾರಿ ಜಿ.ಶ್ರೀಹರ್ಷ ಸೇರಿದಂತೆ ಪದಾಧಿಕಾರಿಗಳು ಹಾಗೂ ವಿಜ್ಞಾನ ಕಾರ್ಯಕರ್ತರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!