ಮನವಿ

ಕೂಡಿಗೆಯಿಂದ ಕುಶಾಲನಗರಕ್ಕೆ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಲು ಮನವಿ

ಕುಶಾಲನಗರ, ಸೆ 30: ಕುಶಾಲನಗರ ಪಟ್ಟಣಕ್ಕೆ ಕೂಡಿಗೆಯಿಂದ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ಪೈಪ್‌ಲೈನ್ ಕಾಮಗಾರಿ ಕೈಗೊಳ್ಳಲಾಗಿದ್ದು, ಕಾಮಗಾರಿ ಇನ್ನೂ ಸಂಪೂರ್ಣವಾಗಿ ಪೂರ್ಣಗೊಂಡಿಲ್ಲ.

ಪ್ರಸ್ತುತ ಮಳೆ ಅಭಾವದಿಂದಾಗಿ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಕೊರತೆ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆಯ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದೆ.

ಆದ್ದರಿಂದ, ಕೂಡಿಗೆಯಿಂದ ಕುಶಾಲನಗರಕ್ಕೆ ಸಂಪರ್ಕ ಕಲ್ಪಿಸುವ ಪೈಪ್‌ಲೈನ್ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಕುಶಾಲನಗರದ ಜನರಿಗೆ ಸಮರ್ಪಕ ಹಾಗೂ ನಿರಂತರ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಈ ವಿಷಯವನ್ನು ತುರ್ತಾಗಿ ಪರಿಗಣಿಸಿ, ಬಾಕಿ ಇರುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೋಮವಾರಪೇಟೆ ಮಂಡಲ ಬಿಜೆಪಿ ಉಪಾಧ್ಯಕ್ಷ ಎಂ.ಡಿ.ಕೃಷ್ಣಪ್ಪ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!