ಸುದ್ದಿಗೋಷ್ಠಿ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹೆಬ್ಬಾಲೆ ಗ್ರಾಪಂ ಮಾಜಿ ಜನಪ್ರತಿನಿಧಿ ಬಗ್ಗೆ ಆಕ್ರೋಷ

ಕುಶಾಲನಗರ, ಅ 16: ಸ್ವಾರ್ಥ ರಾಜಕಾರಣಕ್ಕೆ ಪಕ್ಷ ಬದಲಾಯಿಸಿ ಶಾಸಕರನ್ನು ತೆಗಳುವ ಛಾಳಿ ಸಲ್ಲದು ಎಂದು ಕೆಪಿಸಿಸಿ ಸಂಯೋಜಕ ನಟೇಶ್ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಬ್ಬಾಲೆ ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಹಾಲಿ ಶಾಸಕರ ಕಾರ್ಯವೈಖರಿಯ ಬಗ್ಗೆ ತೆಗೆಳುವುದು ಸಮಂಜಸವಲ್ಲ. ಕಾಂಗ್ರೆಸ್ ಪಕ್ಷದಲ್ಲಿದ್ದ ಸಂದರ್ಭ ಶಾಸಕರಿಂದ ಹಲವು ಅನುಕೂಲಗಳನ್ನು ಪಡೆದು ಇದೀಗ ಬಿಜೆಪಿ ಮುಖಂಡರನ್ನು ಮೆಚ್ಚಿಸುವ ಸಲುವಾಗಿ ಹಾಲಿ ಶಾಸಕರ ಅವಹೇಳನ‌ ಮಾಡುವುದು ಸರಿಯಲ್ಲ ಎಂದರು.
ಕಳೆದ ಮೂರು ವರ್ಷ ಅವಧಿಯಲ್ಲಿ ಒಂದು ಸಾವಿರ ಕೋಟಿಗೂ ಅಧಿಕ ಮೊತ್ತ ಅನುದಾನ ತಂದಿರುವ ಶಾಸಕ ಡಾ.ಮಂತರ್ ಗೌಡ ಅವರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಕೈಗೊಂಡಿದ್ದಾರೆ. ಶಾಸಕರ ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿ ಮುಂಬರುವ ಚುನಾವಣೆಯಲ್ಲಿ ಪಕ್ಷದಿಂದ ಯಾರೇ ಸ್ಪರ್ಧಿಸಿದರು ಗೆಲುವು ಸಾಧಿಸಲಿದ್ದಾರೆ. ತಾನೂ ಕೂಡ ಹೆಬ್ಬಾಲೆ ಜಿಪಂ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದೇನೆ ಎಂದು ತಿಳಿಸಿದರು.
ಸಾಮಾಜಿಕ ಕಾರ್ಯಕರ್ತ, ಹಕ್ಕೆ‌ ಮೋಹನ್ ಮಾತನಾಡಿ, ಶಾಸಕ ಮಂತರ್ ಗೌಡ ಅವರ ಕಾರ್ಯವೈಖರಿ ಮೆಚ್ಚಿ ಹಲವರು ಈಗಾಗಲೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಹೆಬ್ಬಾಲೆ ಗ್ರಾಪಂ ಮಾಜಿ ಜನಪ್ರತಿನಿಧಿ ಮಹದೇವ್ ಮಾತನಾಡಿ, ಶಾಸಕ ಮಂತರ್ ಗೌಡ ಅವರ ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತರಾಗಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಬಗ್ಗೆ ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!