ಕುಶಾಲನಗರ, ಅ 17: ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆ- ಮಾರುತಿನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ಬದಿಯ ಮರಕ್ಕೆ ಕಾರೊಂದು ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಚಿತ್ರದುರ್ಗದ
ಹಿರಿಯೂರಿವಿನಿಂದ ಮಡಿಕೇರಿ ದಸರಾ ಕಾರ್ಯಕ್ರಮ ವೀಕ್ಷಿಸಲು ಆಗಮಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಈ ಕಾರಿನಲ್ಲಿ ಐವರು ಪ್ರಯಾಣಿಕರಿದ್ದು, ಚಾಲಕ ಸೇರಿ ಮತ್ತೊಬ್ಬ ಮೃತಪಟ್ಟಿದ್ದಾರೆ.
ಉಳಿದ ಮೂವರಿಗೆ ತಲೆ, ಕೈ ಕಾಲುಗಳಿಗೆ ಗಾಯಗಳುಂಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಬಗ್ಗೆ ಮತ್ತು ಮೃತ ಯುವಕರ ಬಗ್ಗೆ ಇನ್ನಷ್ಟೇ ಮಾಹಿತಿ ಲಭಿಸಬೇಕಾಗಿದೆ.
ಮಳೆಯ ಪರಿಣಾಮ ಈ ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
Back to top button
error: Content is protected !!