ಕುಶಾಲನಗರ, ಅ 31:
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೊಡಗು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಧ್ವಜಾರೋಹಣ ನೆರವೇರಿಸಿ, ಕನ್ನಡ ರಾಜ್ಯೋತ್ಸವವನ್ನು ಗೌರವಪೂರ್ವಕವಾಗಿ ಆಚರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕೊಡಗು ಜಿಲ್ಲೆ ಆಗ್ರಹಿಸುತ್ತದೆ.
ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಗೌರವವನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಕನ್ನಡ ರಾಜ್ಯೋತ್ಸವವನ್ನು ಕಡ್ಡಾಯವಾಗಿ ಆಚರಿಸುವಂತೆ ಜಿಲ್ಲಾಡಳಿತ ಸೂಕ್ತ ನಿರ್ದೇಶನ ನೀಡಬೇಕು.
ಕನ್ನಡ ರಾಜ್ಯೋತ್ಸವವನ್ನು ಆಚರಿಸದೆ ನಿರ್ಲಕ್ಷ್ಯ ತೋರುವ ಸರ್ಕಾರಿ ಇಲಾಖೆಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ.
ಕನ್ನಡವೇ ನಮ್ಮ ಉಸಿರು, ಕನ್ನಡವೇ ನಮ್ಮ ಹೆಮ್ಮೆ!
ದೀಪಕ್ ಕನ್ನಡಿಗ
ಜಿಲ್ಲಾಧ್ಯಕ್ಷರು
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)
ಕೊಡಗು ಜಿಲ್ಲೆ
Back to top button
error: Content is protected !!