ಟ್ರೆಂಡಿಂಗ್

ಕೂಡಿಗೆ ಗ್ರಾಪಂ ವ್ಯಾಪ್ತಿಯಲ್ಲಿ 5 ಕೋಟಿ‌ ಮೊತ್ತದ ಕಾಮಗಾರಿಗೆ ಶಾಸಕರಿಂದ ಚಾಲನೆ

ಕುಶಾಲನಗರ, ನ 18: ಕೂಡಿಗೆ ಗ್ರಾಪಂ ವ್ಯಾಪ್ತಿಯಲ್ಲಿ 5 ಕೋಟಿ‌ ರೂ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ‌.ಮಂತರ್ ಗೌಡ ಚಾಲನೆ ನೀಡಿದರು.

ಸಣ್ಣ ನೀರಾವರಿ ಇಲಾಖೆ‌ ಮೂಲಕ‌ 1 ಕೋಟಿ ವೆಚ್ಚದಲ್ಲಿ ಮಲ್ಲೇನಹಳ್ಳಿ ಗ್ರಾಮದಲ್ಲಿ ಮುಖ್ಯರಸ್ತೆಯಿಂದ ಹಾರಂಗಿ ಪಂಪ್ ಹೌಸ್ ಗೆ ತೆರಳುವ ಮಾರ್ಗ ಅಭಿವೃದ್ಧಿ ಮತ್ತು ಸೀಗೆಹೊಸೂರು ಗ್ರಾಮದಲ್ಲಿ 4 ಕೋಟಿ ರೂ ವೆಚ್ಚದಲ್ಲಿ ಕೈಗೊಂಡಿರುವ ನೀರಾವರಿ ನಾಲೆಗೆ ಕಾಂಕ್ರಿಟ್ ಲೈನಿಂಗ್ ಹಾಗೂ ಸೇವಾ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿ ಸಂದರ್ಭ ರೈತರು ಹಾಗೂ ಗ್ರಾಮಸ್ಥರಯ ಅಗತ್ಯ ಸಹಕಾರ ನೀಡಬೇಕು. ಕೆಲವು ದಿನಗಳ ಅನಾನುಕೂಲತೆ ಬದಿಗೊತ್ತಿ ಅಭಿವೃದ್ಧಿ ಕಾಮಗಾರಿ ಗುಣಮಟ್ಟದಲ್ಲಿ ಪೂರ್ಣಗೊಳಿಸಲು ಕೈಜೋಡಿಸಬೇಕು ಎಂದು ಕೋರಿದರು.
ಇದೇ ಸಂದರ್ಭ ಸಣ್ಣ ನೀರಾವರಿ ಇಲಾಖೆ ಮೂಲಕ ರೈತರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಶಾಸಕರ ಗಮನ ಸೆಳೆದರು.
ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕೂಡಿಗೆ ಗ್ರಾಪಂ ಮಾಜಿ ಉಪಾಧ್ಯಕ್ಷ ಟಿ.ಪಿ.ಹಮೀದ್, ಮಾಜಿ ಸದಸ್ಯರಾದ ಅನಂತ್, ದೇವರಾಜ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುನಿಲ್ ರಾವ್, ಕೂಡುಮಂಗಳೂರು ಸಹಕಾರ ಸಂಘದ ನಿರ್ದೇಶಕ ಎಸ್.ಎಸ್.ಕೃಷ್ಣ, ಕಾಂಗ್ರೆಸ್ ಮುಖಂಡ ಬಿ.ಡಿ.ಅಣ್ಣಯ್ಯ, ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರಸ್ವಾಮಿ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!