ಸುದ್ದಿಗೋಷ್ಠಿ

ನ.29 ರಿಂದ ಡಿ.01 ರವರೆಗೆ ಶ್ರೀ ಬಸವೇಶ್ವರ ದೇವಾಲಯ ಉದ್ಘಾಟನಾ ಸಮಾರಂಭ

ಕುಶಾಲನಗರ, ನ 26:
ಕುಶಾಲನಗರದ
ಶ್ರೀ ನಂಜುಂಡೇಶ್ವರ ಬಡಾವಣೆಯಲ್ಲಿ ರೂ 40 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಸವೇಶ್ವರ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ
ಶ್ರೀ ನಂಜುಂಡೇಶ್ವರ ಸಭಾಂಗಣದ ಉದ್ಘಾಟನೆ
ಮತ್ತು ಧಾರ್ಮಿಕ ಸಮಾರಂಭ ನವೆಂಬರ್ 29 ರಿಂದ ಡಿಸೆಂಬರ್ 01 ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಎಸ್.ನಂದೀಶ್ ತಿಳಿಸಿದರು.

ನಂಜುಂಡೇಶ್ವರ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟೇಲರ ಕುಟುಂಬಸ್ಥರು ದಾನವಾಗಿ ನೀಡಿರುವ ಜಾಗದಲ್ಲಿ
ಶ್ರೀ ಬಸವೇಶ್ವರ ದೇವಾಲಯ ಟ್ರಸ್ಟ್‌ ಹಾಗೂ ವೀರಶೈವ ಲಿಂಗಾಯತ ಸಮಾಜ ವತಿಯಿಂದ ದೇವಾಲಯ ಮತ್ತು ಸಭಾಂಗಣ ನಿರ್ಮಿಸಲಾಗಿದೆ. ಕೇವಲ ಒಂದು ಸಮುದಾಯದವರಿಗೆ ಮಾತ್ರವಲ್ಲದೆ ಸಮಾಜದ ಎಲ್ಲಾ ಸಮುದಾಯದವರಿಗೆ ಸಭಾಂಗಣದಿಂದ ಅನುಕೂಲ ಕಲ್ಪಿಸಬೇಕೆನ್ನುವುದು ಸ್ಥಳದಾನಿಗಳ ಮುಖ್ಯ ಉದ್ದೇಶವಾಗಿದೆ ಎಂದರು.
ಶ್ರೀ ಬಸವೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಎಂ.ಕೆ.ಧನರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ
ಈ ಸಮಾರಂಭಕ್ಕೆ ನಾಡಿನ ವಿವಿಧ ಮಠಾಧೀಶರು ಆಗಮಿಸಲಿದ್ದು ಕ್ಷೇತ್ರದ ಹಾಲಿ‌ ಮತ್ತು ಮಾಜಿ ಶಾಸಕರು, ಸಚಿವರು, ಸಂಸದರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾಧ್ಯಕ್ಷ
ಹೆಚ್.ವಿ.ಶಿವಪ್ಪ‌, ಪ್ರಧಾನ ಕಾರ್ಯದರ್ಶಿ ಶಾಂಭಶಿವಯ್ಯ ಮತ್ತು ಸಮಾಜದ ಪ್ರಮುಖರಾದ ಪ್ರಾಂಶುಪಾಲ ಕುಮಾರ್ ಮಾತನಾಡಿ, 29 ರಂದು ವಿವಿಧ ಪೂಜೆ, ಹೋಮ ಹವನ, 30 ರಂದು ವಿಗ್ರಹ ಪ್ರತಿಷ್ಠಾಪನೆ ಹಾಗೂ ಶಿಖರ ಕಳಶ ಸ್ಥಾಪನೆ, 01 ರಂದು ಸಭಾಂಗಣ ಉದ್ಘಾಟನೆ ಮತ್ತು ಧಾರ್ಮಿಕ ಸಮಾರಂಭ ನಡೆಯಲಿದೆ. ಅಂದು ನಡೆಯುವ ಕಾರ್ಯಕ್ರಮಕ್ಕೆ ಭಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ‌ ಮಾಡಿದರು.

ಗೋಷ್ಠಿಯಲ್ಲಿ ಸ್ಥಳದಾನಿ ರಾಜಣ್ಣ, ಶ್ರೀ ಬಸವೇಶ್ವರ ದೇವಾಲಯ ಟ್ರಸ್ಟ್ ಅಧ್ಯಕ್ಷ ಎಂ.ಕೆ.ಧನರಾಜ್, ಪ್ರಧಾನ ಕಾರ್ಯದರ್ಶಿ ಬಸವರಾಜು, ನಿರ್ದೇಶಕ ಲೋಕೇಶ್, ಪುರಸಭೆ ಮಾಜಿ ಸದಸ್ಯ ಎಂ.ಬಿ.ಸುರೇಶ್, ಪ್ರಮುಖರಾದ ಕೆ.ಎಸ್.ಮೂರ್ತಿ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!