ಟ್ರೆಂಡಿಂಗ್

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಪೊಲೀಸರ ಮಾನವೀಯ ಸೇವೆ

ಕುಶಾಲನಗರ, ನ 26: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಇಲಾಖೆ ವಾಹನದಲ್ಲಿ ಸಕಾಲದಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸುವ ಮೂಲಕ ಕುಶಾಲನಗರ ಪೊಲೀಸರು ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ.

ಕೂಡಿಗೆ-ಹಾಸನ ಹೆದ್ದಾರಿಯಲ್ಲಿ ಅಪರಿಚಿತ ವಾಹನ‌ ಡಿಕ್ಕಿಯಾಗಿ ಬೈಕ್ ಸವಾರ ಕಾಲು ಮುರಿದು ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಹೆಚ್.ಟಿ.ಗೀತಾ ಮತ್ತು ಸಿಬ್ಬಂದಿಗಳು ತಮ್ಮದೇ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯ ಮೌಲ್ಯ ಸಾರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!