ಕುಶಾಲನಗರ, ಸೆ 15:
ಕುಶಾಲನಗರ ತಾಲೂಕಿನ ಶಿರಂಗಾಲ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಕೆ.ಜೆ.ಗೀತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಅಧ್ಯಕ್ಷೆಯಾಗಿದ್ದ ಭಾಗೀರಥಿ ವಿರುದ್ಧ 6 ಮಂದಿ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿ ಪದಚ್ಯುತಿಗೊಳಿಸಿದ್ದರು. ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ದಿನಾಂಕ ನಿಗದಿ ಪಡಿಸಿ ಉಪ ವಿಭಾಧಿಕಾರಿ ಯತೀಶ್ ಉಲ್ಲಾಳ್ ಆದೇಶಿಸಿದ್ದರು.
ಈ ಪ್ರಕಾರ ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಟಿ.ಎಂ.ಪ್ರಕಾಶ್ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.ಅಧ್ಯಕ್ಷ ಸ್ಥಾನಕ್ಕೆ ಕೆ.ಜೆ.ಗೀತಾ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಗೀತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು. 9 ಮಂದಿ ಸದಸ್ಯರ ಪೈಕಿ ಮಾಜಿ ಅಧ್ಯಕ್ಷೆ ಭಾಗೀರಥಿ ಗೈರು ಹಾಜರಾಗಿದ್ದರು. ಉಪಾಧ್ಯಕ್ಷ ಎನ್.ಎನ್.ಧರ್ಮಪ್ಪ ಸದಸ್ಯರಾದ ಎಸ್.ಬಿ.ಶ್ರೀಕಾಂತ್,ಎಸ್.ಎ.ಪ್ರದೀಪ, ಲಕ್ಷ್ಮಿ,ಎಂ.ಆರ್.ಲತಾಬಾಯಿ, ಎಚ್.ಎಸ್.ಬಸವರಾಜು,ಸರಿತಾ, ಚುನಾವಣಾ ಪ್ರಕ್ರಿಯೆಯಲ್ಲಿ ಹಾಜರಾಗಿದ್ದರು. ಸಹಾಯಕ ಚುನಾವಣಾಧಿಕಾರಿಯಾಗಿ ಲೋಹಿತ್ ಹಾಗೂ ಚೇತನ್ ಕಾರ್ಯನಿರ್ವಹಿಸಿದರು.
ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ.ಆರ್.ಹೇಮಲತಾ,ಕಾರ್ಯದರ್ಶಿ ಕೆ.ಆರ್.ರವಿ.ಹಾಗೂ ಸಿಬ್ಬಂದಿಗಳು ಇದ್ದರು.
Back to top button
error: Content is protected !!