ಕ್ರೈಂ

ಗಾಂಜಾ ಮಾರಾಟ: ಓರ್ವನ ಬಂಧನ

ಕುಶಾಲನಗರ, ಮೇ 27:ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಶನಿವಾರಸಂತೆಯ ಮಾರುಕಟ್ಟೆಯ ಬಳಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸರಬರಾಜು/ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು/ ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ  ಪಿ.ಚಂದ್ರಶೇಖರ್, ಡಿಎಸ್‌ಪಿ, ಸೋಮವಾರಪೇಟೆ ಉಪವಿಭಾಗ,  ಕೃಷ್ಣರಾಜು, ಪಿಐ, ಶನಿವಾರಸಂತೆ ಪೊಲೀಸ್ ಠಾಣೆ ಹಾಗೂ  ಚಂದ್ರು.ಹೆಚ್.ವೈ, ಪಿಎಸ್‌ಐ, ಶನಿವಾರಸಂತೆ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 26-05-2025 ರಂದು ಶನಿವಾರಸಂತೆಯ ಮಾರುಕಟ್ಟೆಯ ಬಳಿ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು/ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಅಸ್ಸಾಂ ರಾಜ್ಯ ಮೂಲದ ಅಪ್ಪಶೆಟ್ಟಳ್ಳಿ ಗ್ರಾಮದ ನಿವಾಸಿ ಮೈನುಲ್ ಹಕ್, (30 ವರ್ಷ) ಎಂಬಾತನನ್ನು 01 ಕೆ.ಜಿ 20 ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!