ಕುಶಾಲನಗರ, ಸೆ 16 ಕೊಡಗು ಸಹಕಾರ ಸಂಘಗಳ
ಉಪನಿಬಂಧಕರ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನಲೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳ ತಂಡ ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡಿದೆ.
ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಸಂಘದ ನೋಂದಾವಣಿಗೆ9 ಸಾವಿರ ಬೇಡಿಕೆ ಇಟ್ಟು ಕಛೇರಿ ಬಳಿ 8 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿ ವಶಕ್ಕೆ ಪಡೆಯಲಾಯಿತು.
ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ
ಡಿವೈಎಸ್ಪಿ ಪವನ್ ಕುಮಾರ್ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ.
Back to top button
error: Content is protected !!