ಕಾರ್ಯಕ್ರಮ
ಕೂಡಿಗೆ ವೃದ್ದಾಶ್ರಮದಲ್ಲಿ ನರೇಂದ್ರಮೋದಿ ಹುಟ್ಟುಹಬ್ಬ ಆಚರಣೆ.
ಕುಶಾಲನಗರ, ಸೆ 17: ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ನೇತ್ರತ್ವದಲ್ಲಿ ಕೂಡಿಗೆಯಲ್ಲಿರುವ ಶ್ರೀ ಶಕ್ತಿ ವೃದ್ದಾಶ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ಹುಟ್ಟು ಹಬ್ಬ ಆಚರಿಸಲಾಯಿತು. ವೃದ್ಧರಿಗೆ ದಿನೋಪಯೋಗಿ ವಸ್ತುಗಳನ್ನು ನೀಡುವುದರ ಜೊತೆಗೆ ಅನ್ನದಾಸೋಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತು.
ಈ ಸಂದರ್ಭ ಮಾತನಾಡಿದ ಶಾಸಕರು, ವೃದ್ದಾಶ್ರಮಕ್ಕೆ ನೂತನ ಕಟ್ಟಡಕ್ಕೆ ಗ್ರಾಮ ಪಂಚಾಯತಿ ವತಿಯಿಂದ ಜಾಗ ಗುರುತಿಸಿದಲ್ಲಿ ಶಾಸಕರ ಮತ್ತು ಇಲಾಖೆ ಅನುದಾನವನ್ನು ಬಳಕೆ ಮಾಡಿಕೊಂಡು ವಯೋವೃದ್ಧರಿಗೆ ಅನುಕೂಲವಾಗುವಂತೆ ಸುಸಜ್ಜಿತ ಕಟ್ಟಡವನ್ನು ನಿರ್ಮಾಣ ಮಾಡುವ ಭರವಸೆ ನೀಡಿದರು.
ಮೋದಿ ಹುಟ್ಟು ಹಬ್ಬದ ಅಂಗವಾಗಿ ಕೂಡಿಗೆ ಮತ್ತು ಸುಂಟಿಕೊಪ್ಪದ ವೃದ್ದಾಶ್ರಮದ ವಯೋವೃದ್ಧರಿಗೆ ಅನುಕೂಲವಾಗುವಂತೆ ದಿನೋಪಯೋಗಿ ವಸ್ತುಗಳನ್ನು ವಿತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಲ್ಲಿಗೆ ಬೇಕಾಗುವ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಅಪ್ಪಚ್ಚು ರಂಜನ್ ತಿಳಿಸಿದರು.
ಈ ಸಂದರ್ಭ ತಾಲ್ಲೂಕು ಬಿ ಜೆ ಪಿ ಅಧ್ಯಕ್ಷ ಮನುಕುಮಾರ್ ರೈ, ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಜೈವರ್ಧನ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ, ಹೆಬ್ಬಾಲೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅರುಣಕುಮಾರಿ ಕುಶಾಲನಗರ ನಗರ ಬಿ ಜೆ ಪಿ ಅಧ್ಯಕ್ಷ ಉಮಾಶಂಕರ್, ಕೂಡುಮಂಗಳೂರು ಶಕ್ತಿ ಕೇಂದ್ರ ಅಧ್ಯಕ್ಷ ಮಂಜುನಾಥ, ಜಿಲ್ಲಾ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಪ್ರಭಾಕರ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಂಚೀರ ಮನುನಂಜುಡ, ಕೆ.ಕೆ ಭೋಗಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಮಂಜುಳ, ಸೇರಿದಂತೆ ಕಾರ್ಯಕರ್ತರು ಇದ್ದರು.