ಕುಶಾಲನಗರ, ಸೆ 19: ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆಯ ನಿಯೋಗ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿ ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಯವರನ್ನು ಭೇಟಿ ಮಾಡಿದೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕು ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿ ಸರ್ವೆ ನಂಬರ್ 54/2 ರಲ್ಲಿ 5 ಸೆಂಟ್ ಕಾಯ್ದಿರಿಸಿಕೊಂಡಿರುವ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಸಮುದಾಯದ ಭವನ ನಿರ್ಮಾಣಕ್ಕೆ 3 ಕೋಟಿ ವೆಚ್ಚದ ನೀಲಿ ನಕ್ಷೆಯನ್ನು ತಯಾರಿಸಲಾಗಿದೆ. ಈ ಸಮುದಾಯ ಭವನಕ್ಕೆ ಸರಕಾರದ ವತಿಯಿಂದ ಹಣವನ್ನು ಒದಗಿಸುವಂತೆ ಮನವಿಯನ್ನು ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಸಚಿವರು ಇಲಾಖೆ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ಕೊಡಗು ಜಿಲ್ಲೆಯಲ್ಲಿ ಸಂಗೊಳ್ಳಿ ರಾಯಣ್ಣ ಸಮುದಾಯದ ಭವನಕ್ಕೆ ಅನುದಾನವನ್ನು ನೀಡುವ ಭರವಸೆ ನೀಡಿದ್ದಾರೆ ಎಂದು ಜಿಲ್ಲಾ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಪ್ರಭಾಕರ್ ತಿಳಿಸಿದ್ದರು.
ಈ ಸಂದರ್ಭ ವೇದಿಕೆ ಪ್ರಮುಖರಾದ ಮಂಜುನಾಥ್, ಬಿ.ಕೆ. ಮೋಹನ್, ಭುವನಗಿರಿ ಮಹದೇವ, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯ ಗಿರೀಶ್, ಕುಮಾರ್ ಮತ್ತಿತರರು ಇದ್ದರು.
Back to top button
error: Content is protected !!