ಕುಶಾಲನಗರ, ನ 03: ಗುಡ್ಡೆಹೊಸೂರು-ನಂಜರಾಯಪಟ್ಟಣ ಮಾರ್ಗದಲ್ಲಿರುವ ಅಪಾಯಕಾರಿ ರಸ್ತೆ ಗುಂಡಿಗಳನ್ನು ಮುಚ್ಚಲು ಕೂಡಲೆ ಕ್ರಮವಹಿಸಬೇಕಿದೆ ಎಂದು ನಂಜರಾಯಪಟ್ಟಣ ಗ್ರಾಪಂ ಮಾಜಿ ಅಧ್ಯಕ್ಷ ಸಿ.ಎಲ್.ವಿಶ್ವ ಆಗ್ರಹಿಸಿದ್ದಾರೆ.
ಈ ಮಾರ್ಗದಲ್ಲಿ ಅಲ್ಲಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು ಇದೇ ಕಾರಣದಿಂದ ಕಳೆದೆರೆಡು ದಿನಗಳ ಹಿಂದೆ ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಈಗಾಗಲೆ ಲೋಕೋಪಯೋಗಿ ಇಲಾಖೆ ಅಭಿಯಂತರರ ಗಮನಕ್ಕೆ ತರಲಾಗಿದ್ದು, 4 ದಿನಗಳೊಳಗೆ ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕಾರ್ಯ ನಡೆಸುವುದಾಗಿ ತಿಳಿಸಿದ್ದಾರೆ.
ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಶೀಘ್ರವಾಗಿ ಕೈಗೊಳ್ಳಬೇಕಿದೆ. ಕಾಮಗಾರಿ ವಿಳಂಭವಾದಲ್ಲಿ ಗ್ರಾಮಸ್ಥರೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ವಿಶ್ವ ಅವರು ಎಚ್ಚರಿಸಿದ್ದಾರೆ.
Back to top button
error: Content is protected !!