ಕುಶಾಲನಗರ, ಸೆ 22: ಕು ಶಾಲನಗರ ಸಮೀಪದ ನಂಜರಾಯಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಮತ್ತು ನಿವೃತ ಶಿಕ್ಷಕಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ನಂಜರಾಯಪಟ್ಟಣ ಗ್ರಾಮಪಂಚಾಯ್ತಿ ಮತ್ತು ಬಾಲವಿಕಾಸ ಸಮಿತಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಣಂತಿಯರಿಗೆ ಸೀಮಂತ ನೆರವೇರಿಸಲಾಯಿತು.ನಿವೃತ ಶಿಕ್ಷಕಿ ಭಾಗೀರಥಿ ಅವರನ್ನು ಸನ್ಮಾನಿಸಲಾಯಿತು.
ನಂಜರಾಯಪಟ್ಟಣ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಿ.ಎಲ್.ವಿಶ್ವ ಹಾಜರಿದ್ದು ಪೋಷಣ್ ಅಭಿಯಾನದ ಬಗ್ಗೆ ಮಾತನಾಡಿದರು. ಗ್ರಾಪಂ ಪಿ.ಡಿ.ಓ ಕಲ್ಪನಾ, ನಿವೃತ ಮೇಲ್ವಿಚಾರಕಿ ಯಶೋಧ, ನಂಜರಾಯಪಟ್ಟಣ ವರ್ತುಲದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಜರಿದ್ದರು.
Back to top button
error: Content is protected !!