ಕುಶಾಲನಗರ, ಸೆ 24: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ – ಹಳ್ಳಿಸಂತೆ ಗಮನ ಸೆಳೆಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳು ಗ್ರಾಮ ಪಂಚಾಯತ್ ಒಕ್ಕೂಟದಿಂದ ಸಾಲ ಪಡೆದು ತಮ್ಮದೇ ಸ್ವಂತ ಉದ್ಯೋಗವನ್ನು ಮಾಡುವ ಮೂಲಕ ಮಹಿಳಾ ಸ್ವಾವಲಂಬಿಯಾಗಲು ಪಂಚಾಯಿತಿ ಅವಕಾಶ ಮಾಡಿಕೊಡುತ್ತಿದೆ. ಈ ನಿಟ್ಟಿನಲ್ಲಿ ಮಹಿಳಾ ಸಂಘಗಳು ಮಾಡುತ್ತಿರುವ ಉದ್ಯೋಗ ತಯಾರಿಸುತ್ತಿರುವ ಉತ್ಪನ್ನಗಳಿಗೆ ವ್ಯಾಪಕ ಪ್ರಚಾರ ನೀಡುವುದು ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳ್ಳಿಸಂತೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪ್ರದರ್ಶನ ಮತ್ತು ಮಾರಾಟ ಮೇಳವು ಮಹಿಳೆಯರಿಗೆ ಬಹುದೊಡ್ಡ ವೇದಿಕೆಯಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಿ.ಕೆ. ಚೆಲುವರಾಜು ಉದ್ಘಾಟಿಸಿದರು. ಈ ಸಂದರ್ಭ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ಜಗದೀಶ್ ಮಾತನಾಡಿ, ಮುಳ್ಳುಸೋಗೆ ಗ್ರಾಮ ಪಂಚಾಯಿತಿಯು ತನ್ನ ವಿಭಿನ್ನ ಕಾರ್ಯಕ್ರಮಗಳ ಮೂಲಕ ಹೊಸ ಹೊಸ ಕೆಲಸಗಳನ್ನು ಮಾಡುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳ ಏಳಿಗೆಗಾಗಿ ಗ್ರಾಮೀಣ ಸಂತೆಯನ್ನು ಮಾಡುವ ಮೂಲಕ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಗ್ರಾಮ ಪಂಚಾಯಿತಿಯಾಗಿ ಹೊರಹೊಮ್ಮಿದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಸಹ ಆಯೋಜಿಸಲಾಗಿತು. ಕೂಡಿಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ತೇಜಸ್ವಿ ಹಾಗೂ ಸಿಬ್ಬಂದಿ ವರ್ಗದವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಜಯಮ್ಮ, ಪಿಡಿಒ ಸುಮೇಶ್, ಆಡಳಿತ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.
Back to top button
error: Content is protected !!