ಕಾರ್ಯಕ್ರಮ

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಚತಾ ಹೀ ಸೇವಾ ಆಂದೋಲನ

ಕುಶಾಲನಗರ, ಸೆ 25: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ
ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವತಿಯಿಂದ
ಶಾಲೆಯ ಇಕೋ ಕ್ಲಬ್, ಎನ್.ಎಸ್.ಎಸ್.ಘಟಕ ಆಶ್ರಯದಲ್ಲಿ ಶನಿವಾರ
‘ಸ್ವಚ್ಚತಾ ಹೀ ಸೇವಾ’ ಆಂದೋಲನವನ್ನು ನಡೆಸಲಾಯಿತು.
ಸ್ವಚ್ಚತಾ ಆಂದೋಲನದ ಮಹತ್ವದ ಕುರಿತು ಮಾಹಿತಿ ನೀಡಿದ
ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾಹಿತಿ‌ ನೀಡಿದರು.
ನಾವು ನಮ್ಮೆಲ್ಲರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ಉದ್ದೇಶದಿಂದ ಒಮ್ಮೆ ಉಪಯೋಗಿಸಿದ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವ ಮೂಲಕ ಪರಿಸರ ಸ್ನೇಹಿ ವಸ್ತುಗಳಾದ ಬಟ್ಟೆ, ಸೆಣಬು ಹಾಗೂ ಕಾಗದ ವಸ್ತುಗಳನ್ನು ಉಪಯೋಗಿಸಬೇಕು ಎಂದರು.
ಇಕೋ ಕ್ಲಬ್ ನ ಉಸ್ತುವಾರಿ
ಬಿ.ಡಿ.ರಮ್ಯ,
ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಸ್ವಚ್ಚತಾ ಹೀ ಸೇವೆಯ ಮಹತ್ವ ಕುರಿತು ಮಾತನಾಡಿದ
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ.ಆರ್.ಸಂತೋಷ್,
ಸಾರ್ವಜನಿಕರು, ವಿದ್ಯಾರ್ಥಿಗಳು ಎಲ್ಲಾ ರೀತಿಯ ಕಸದ ಸ್ವಚ್ಚತೆಯ ಬಗ್ಗೆ ಸಮುದಾಯ ಹಾಗೂ ಪಾಲಕರಿಗೆ ಮನವರಿಕೆ ಮಾಡಿಸುವ ಕಾರ್ಯವಾಗಬೇಕಿದೆ ಎಂದರು.
ಎಸ್.ಡಿ.ಎಂ.ಸಿ.
ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ,
ಸ್ವಚ್ಚತಾ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿದರು.
ಎಸ್.ಡಿ.ಎಂ.ಸಿ. ಸದಸ್ಯ
ಜವರಯ್ಯ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ವೈ.ಎಂ.ಸರಸ್ವತಿ ಇದ್ದರು.
ಶಿಕ್ಷಕರು‌ ಹಾಗೂ
ವಿದ್ಯಾರ್ಥಿಗಳು ಕೂಡ್ಲೂರು ಗ್ರಾಮದ
ಮನೆ ಮನೆಗೆ ತೆರಳಿ ಶೌಚಾಲಯ ನಿರ್ಮಾಣ, ಸ್ವಚ್ಚತಾ ಮಾಹಿತಿ ಒಳಗೊಂಡ ಕರಪತ್ರಗಳನ್ನು ನೀಡಿ ಜಾಗೃತಿ ಮೂಡಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!