ಕಾರ್ಯಕ್ರಮ

ಸಿದ್ದಲಿಂಗಪುರದಲ್ಲಿ ರೂ 20 ಲಕ್ಷ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ ಭೂಮಿಪೂಜೆ

ಕುಶಾಲನಗರ, ಸೆ 25: ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದಲಿಂಗಪುರ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವ ನವಗ್ರಾಮದಲ್ಲಿ ರೂ 20 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ‌ ನೆರವೇರಿಸಿದರು. ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ರಸ್ತೆಗಳ ಅಭಿವೃದ್ಧಿಯಿಂದ ರೈತಾಪಿ ವರ್ಗಕ್ಕೆ ಹೆಚ್ಚಿನ ಅನುಕೂಲ‌ ಲಭಿಸಲಿದೆ. ಅತಿಯಾದ ಮಳೆಯಿಂದಾಗಿ ಡಾಂಬರು ರಸ್ತೆಗಳು ಹಾಳಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಮಗಳ ಸಂಪರ್ಕ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಯನ್ನಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ, ಉಪಾಧ್ಯಕ್ಷ ಎಂ. ಟಿ, ಬೇಬಿ, ಸದಸ್ಯರುಗಳು ಮತ್ತು ಗ್ರಾಮಸ್ಥರು ಇದ್ದರು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!