ಕುಶಾಲನಗರ, ಸೆ 26:
ಮನೆಯಿಂದ ಹೊರಗೆ ಹೋಗಿದ್ದ ವ್ಯಕ್ತಿಯ ಶವ ಲಕ್ಷ್ಮಣತೀರ್ಥ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಹುಣಸೂರು ತಾಲೂಕು ಕಟ್ಟೆಮಳಲವಾಡಿಯ ಮೈಲಾರಿ(೬೦), ಸೆ.೮ ರಂದು ಬೆಳಗ್ಗೆ ಮನೆಯಿಂದ ಹೊರಗೆ ಹೋಗಿದ್ದರು, ಅಂದಿನಿಂದ ಕಾಣೆಯಾಗಿದ್ದು, ಈ ಸಂಬಂಧ ಪುತ್ರ ಶೇಖರ್ ಗ್ರಾಮಾಂತರ ಠಾಣೆ ಪೊಲೀಸರಿಗೆ ತಂದೆ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು. ಸೆ.೨೪ರ ಶನಿವಾರ ಕಟ್ಟೆಮಳಲವಾಡಿ ಅಣೆಕಟ್ಟೆಯಲ್ಲಿ ಮೈಲಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಣೆಕಟ್ಟೆ ಬಳಿಗೆ ತೆರಳಿದ್ದವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು, ಕುಟುಂಬದವರ ಸಮ್ಮಖದಲ್ಲಿ ಶವ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸು ದಾರರಿಗೊಪ್ಪಿಸಿದರು. ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.
Back to top button
error: Content is protected !!