ಕುಶಾಲನಗರ, ಮೇ 10: ಕುಶಾಲನಗರ ಸಾರಿಗೆ ಬಸ್ ನಿಲ್ದಾಣ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಅನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ, ಉಪಾಧ್ಯಕ್ಷೆ ಪುಟ್ಟ ಲಕ್ಷ್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ.ಸುರೇಶ್, ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡುರಾವ್, ನಟೇಶ್ ಗೌಡ, ಪುರಸಭೆ ಸದಸ್ಯರಾದ ವಿ.ಎಸ್.ಆನಂದಕುಮಾರ್, ಎಂ.ಕೆ.ದಿನೇಶ್, ಶಿವಶಂಕರ್, ಎಂ.ಎಂ.ಪ್ರಕಾಶ್, ಜಯಲಕ್ಷ್ಮಮ್ಮ ನಂಜುಂಡಸ್ವಾಮಿ, ಶೇಖ್ ಕಲೀಮುಲ್ಲಾ, ಸುರಯ್ಯಭಾನು, ಹರೀಶ್, ತಹಸೀಲ್ದಾರ್ ಕಿರಣ್ ಗೌರಯ್ಯ, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಮುಖಂಡರಾದ ಸುನಿತಾ ಮಂಜುನಾಥ್, ರಂಜನ್ ಹೆಬ್ಬಾಲೆ, ಟಿ.ಬಿ. ಜಗದೀಶ್, ಬಿ.ಡಿ.ಅಣ್ಣಯ್ಯ, ಎಸ್.ಎಸ್. ಚಂದ್ರಶೇಖರ್, ಚಂದನ್ ಮತ್ತಿತರರು ಇದ್ದರು.
Back to top button
error: Content is protected !!