ಕ್ರೀಡೆ

ಕುಶಾಲನಗರದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಹಬ್ಬಕ್ಕೆ ಚಾಲನೆ

ಕುಶಾಲನಗರ, ಮೇ 13:: ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆಯಿಂದ ಮೇ 13 14 ಮತ್ತು 15 ರಂದು ಮೂರು ದಿನಗಳ‌ ಕಾಲ ಹಮ್ಮಿಕೊಂಡಿರುವ ಹೊನಲು ಬೆಳಕಿನ ರಾಜ್ಯಮಟ್ಟದ ಕಬ್ಬಡಿ ಹಬ್ಬಕ್ಕೆ ಮಂಗಳವಾರ ಸಂಜೆ ಚಾಲನೆ‌ ನೀಡಲಾಯಿತು.

ಕುಶಾಲನಗರದ‌ ಜಿಎಂಪಿ ಶಾಲಾ ಮೈದಾನದಲ್ಲಿ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ ಏರ್ಪಡಿಸಿರುವ ಪಂದ್ಯಾಟಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.
ಕಬಡ್ಡಿ ಹಬ್ಬದ ಅಂಗವಾಗಿ ಬೈಚನಹಳ್ಳಿ ಮಾರಮ್ಮ ದೇವಾಲಯದಿಂದ ಮೈದಾನದವರೆಗೆ ಕ್ರೀಡಾಪಟುಗಳ, ಸಮುದಾಯ ಬಾಂಧವರು ಮೆರವಣಿಗೆ ನಡೆಸಿದರು.
ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ಅಧ್ಯಕ್ಷ ಎಂ.ಡಿ.ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ,
ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಒಕ್ಕಲಿಗ ಸಂಘದ ರಾಜ್ಯ ನಿರ್ದೇಶಕ ಬಾಗೂರು ನಂಜೇಗೌಡ, ಸರಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಶಿವರುದ್ರಯ್ಯ, ಜಿಪಂ ಮಾಜಿ ಅಧ್ಯಕ್ಷೆ ಚಂದ್ರಕಲಾ, ಮಾಜಿ ಸದಸ್ಯ ವಿ.ಪಿ.ಶಶಿಧರ್, ಪ್ರಮುಖರಾದ ಬಿ.ಬಿ.ಭಾರತೀಶ್ ಸೇರಿದಂತೆ ವೇದಿಕೆಯ ಪದಾಧಿಕಾರಿಗಳಾದ ಜೈರಾಜ್, ಚಂದ್ರಶೇಖರ್ ಹೇರೂರು ಜಗದೀಶ್, ಕಿರಣ್ ಮತ್ತಿತರರು ಇದ್ದರು.
13 ಕೆಯುಎಸ್ 03 ಚಿತ್ರದಲ್ಲಿ ಕುಶಾಲನಗರದಲ್ಲಿ ಹೊನಲು ಬೆಳಕಿನ ರಾಜ್ಯಮಟ್ಟದ ಕಬಡ್ಡಿ ಹಬ್ಬವನ್ನು ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!