ಕುಶಾಲನಗರ, ಸೆ 26: ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮೈದಾನ ನಿರ್ಮಾಣಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಈಗಾಗಲೇ ಚಿಕ್ಕ ಅಳುವಾರದ ಸ್ನಾತಕೋತ್ತರ ಕೇಂದ್ರವು ಕೊಡಗು ಜಿಲ್ಲೆಯ ಜ್ಞಾನ ಕಾವೇರಿ ವಿಶ್ವವಿದ್ಯಾಲಯ ಆಗಿದೆ. ಮುಂದಿನ ದಿನಗಳಲ್ಲಿ ಕುಲ ಸಚಿವರನ್ನು ಸರಕಾರದ ಮೂಲಕ ನೇಮಕ ಮಾಡುವುದರ ಮೂಲಕ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ, ಉಪಾಧ್ಯಕ್ಷ ಬೇಬಿಯಣ್ಣ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾ ಪ್ರಿ. ಚಂದ್ರಶೇಖರಯ್ಯ, ಸದಸ್ಯರಾದ ಕೆ. ಬಿ.ದೇವರಾಜ್, ಟಿ.ಸಿ. ಶಿವಕುಮಾರ್, ನಿಂಗಾಜಮ್ಮ, ಸಾವಿತ್ರಿ, ತೀರ್ಥಾನಂದ, ಮಹದೇವ ಶೋಭ, ಯಶೋಧ, ನೀರಾವರಿ ಇಲಾಖೆಯ ಇಂಜಿನಿಯರ್ ಸತ್ಯ, ಸೇರಿದಂತೆ ಸ್ನಾತಕೋತ್ತರ ಕೇಂದ್ರದ ಎಲ್ಲಾ ಪ್ರಾಧ್ಯಾಪಕ ವೃಂದ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಶಾಸಕರ ಅಪ್ತ ಕಾರ್ಯದರ್ಶಿ ರವಿ ಸೇರಿದಂತೆ ಚಿಕ್ಕ ಅಳುವಾರ ಗ್ರಾಮದ ನೂರಾರು ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!