ಕುಶಾಲನಗರ, ಸೆ 27: ಕೊಡಗು ಜಿಲ್ಲಾ ವಾಲ್ಮೀಕಿ ಅಭಿವೃದ್ಧಿ ನಿಗಮದ ಮೂಲಕ ಬಸವನಹಳ್ಳಿ ಲ್ಯಾಂಪ್ಸ್ ಸಹಕಾರ ಸಂಘದ ಸಹಯೋಗದಲ್ಲಿ ತಾಲೂಕಿನ 14 ಮಂದಿ ಗಿರಿಜನ ಫಲಾನುಭವಿಗಳಿಗೆ ಆಡುಗಳ ವಿತರಣೆ ಮಾಡಲಾಯಿತು.
ಲ್ಯಾಂಪ್ಸ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಕೂಡಿಗೆ, ವಾಲ್ನೂರು, ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ 14 ಮಂದಿ ಫಲಾನುಭವಿಗಳಿಗೆ ತಲಾ 4 ಆಡುಗಳ ವಿತರಣೆ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್, ಶಾಸಕರ ನಿರ್ದೇಶನದಂತೆ ಗಿರಿಜನರ ಆರ್ಥಿಕ ಬಲವರ್ಧನೆಗೆ ನಿಗಮದ ಮೂಲಕ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಫಲಾನುಭವಿಗಳು ಇದರ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕಿದೆ ಎಂದರು.
ಲ್ಯಾಂಪ್ಸ್ ಅಧ್ಯಕ್ಷ ಆರ್.ಕೆ.ಚಂದ್ರ ಮಾತನಾಡಿ, ಶಾಸಕರ ನಿರ್ದೇಶನದಂತೆ ರಾಜ್ಯ ಸರಕಾರದ ಸವಲತ್ತುಗಳನ್ನು ಆಯಾ ಇಲಾಖೆಗಳ ಮೂಲಕ ಪ್ರತಿ ಹಾಡಿಗಳ ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ. ವಾಲ್ಮೀಕಿ ನಿಗಮ ಮೂಲಕ ಇದುವರೆಗೆ ತಾಲೂಕಿನಲ್ಲಿ 330 ಕುಟುಂಬಗಳಿಗೆ ಕುರಿ, ಆಡುಗಳ ವಿತರಣೆ ಮಾಡಲಾಗಿದೆ ಎಂದರು.
ಈ ಸಂದರ್ಭ ಲ್ಯಾಂಪ್ಸ್ ಉಪಾಧ್ಯಕ್ಷ ಬಿ.ಎನ್.ಮನು, ನಿರ್ದೇಶಕರಾದ ಅಣ್ಣಯ್ಯ, ಕಮಲಮ್ಮ, ಮಹೇಶ್, ಸಿಇಒ ಹನಿಕುಮಾರ್, ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಾದಾಮಿ ಮತ್ತು ಸಿಬ್ಬಂದಿಗಳು ಇದ್ದರು.
Back to top button
error: Content is protected !!