ಕುಶಾಲನಗರ, ಸೆ 28: ಕೂಡಿಗೆ ಗ್ರಾಮ ಪಂಚಾಯತಿ, ಟಾಟಾ ಕಾಫಿ ಲಿಮಿಟೆಡ್ ಪಾಲಿಬೆಟ್ಟ, ಅಮ್ಮತ್ತಿಯ ಆರ್.ಐ.ಹೆಚ್.ಪಿ. ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಗಿರಿಜನ ಸಮುದಾಯದವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಬ್ಯಾಡಗೊಟ್ಟ ಅಂಗನವಾಡಿ ಸಭಾಂಗಣದಲ್ಲಿ ನಡೆಯಿತು.
ಬ್ಯಾಡಗೊಟ್ಟ ಗ್ರಾಮದಲ್ಲಿರುವ ಗಿರಿಜನ ಸಮುದಾಯದ 350 ಕ್ಕೂ ಹೆಚ್ಚು ಜನರನ್ನು ಸಂಬಂಧಿಸಿದ ವೈದ್ಯಾಧಿಕಾರಿಗಳು ತಪಾಸಣೆ ಮಾಡಿ ಉಚಿತವಾಗಿ ಔಷಧಿಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯ ಟಿ.ಪಿ. ಹಮೀದ್, ವೈದ್ಯರಾದ ಡಾ. ವಿಷ್ಣುಪ್ರಸಾದ್, ಡಾ.ಗಣಪತಿ, ಸೇರಿದಂತೆ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯತಿ ಕಾರ್ಯದರ್ಶಿ ಪುನಿತ್ ಸೇರಿದಂತೆ ಬ್ಯಾಡಗೊಟ್ಟ ಗ್ರಾಮದ ನೂರಾರು ಗ್ರಾಮಸ್ಥರು ಹಾಜರಿದ್ದರು.
Back to top button
error: Content is protected !!