ಕುಶಾಲನಗರ, ಸೆ.29: ಕಾವೇರಿ ನದಿ ಉತ್ಸವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕಾವೇರಿ ನದಿ ಸ್ವಚ್ಚತಾ ಆಂದೋಲನ ಪ್ರಮುಖರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಕಾವೇರಿ ನದಿ ಸ್ವಚ್ಚತಾ ಆಂದೋಲನ ಆಶ್ರಯದಲ್ಲಿ ಕಾವೇರಿ ನೀರಾವರಿ ನಿಗಮ ಸಹಯೋಗದೊಂದಿಗೆ ಅಕ್ಟೋಬರ್ ೨೧ ರಂದು ತಲಕಾವೇರಿ ಕ್ಷೇತ್ರದಿಂದ ಚಾಲನೆಗೊಳ್ಳಲಿರುವ ಕಾವೇರಿ ನದಿ ಉತ್ಸವ ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾಡಳಿತದ ಸಹಕಾರ ಕೋರಲಾಯಿತು.
ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರೊಂದಿಗೆ ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿ ನೀಡಿ ಚರ್ಚಿಸಲಾಯಿತು. ಕಾವೇರಿ ಸ್ವಚ್ಚತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ.ಎನ್ ಚಂದ್ರಮೋಹನ್, ಜಿಲ್ಲಾ ಸಂಚಾಲಕರಾದ ರೀನಾ ಪ್ರಕಾಶ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪಂಡ ಬೋಸ್ ಮೊಣ್ಣಪ್ಪ, ಟ್ರಸ್ಟಿಗಳಾದ ಡಿ.ಆರ್. ಸೋಮಶೇಖರ್, ಕೆ.ಜಿ ಮನು ಇದ್ದರು.
Back to top button
error: Content is protected !!