ಕಾಮಗಾರಿ

ಭುವನಗಿರಿಯಲ್ಲಿ ರೂ 20 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕುಶಾಲನಗರ, ಫೆ. 2: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಭುವನಗಿರಿ -ಸೀಗೆಹೊಸೂರು ಸಂಪರ್ಕ ಕಲ್ಪಿಸುವ ಹಾರಂಗಿ ಎಡದಂಡೆ ನಾಲೆಯ 6ನೇ ತೂಬಿನ ಬಸವಗಾಡಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡ ವಿಶೇಷ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರೂ 20 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.

ನಂತರ ಮಾತಾನಾಡಿದ ಶಾಸಕ ಮಂತರ್ ಗೌಡ, ಈ ಸಾಲಿನಲ್ಲಿ ಮಡಿಕೇರಿ ಕ್ಷೇತ್ರ ವ್ಯಾಪ್ತಿಯ ಅನೇಕ ಉಪ ಗ್ರಾಮಗಳಿಗೆ ಉಪ ಸಂಪರ್ಕ ರಸ್ತೆಯನ್ನು ನಿರ್ಮಾಣಗೊಳಿಸಲಾಗಿದ್ದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ, ಮುಂದಿನ ದಿನಗಳಲ್ಲಿ ಗಿರಿಜನ ಉಪಯುಕ್ತ ಯೋಜನೆಯ ಅಡಿಯಲ್ಲಿ ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಅನುದಾನವನ್ನು ಕಾಯ್ದಿರಿಸಿ, ನೂತನ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಹೆಚ್ಚಿನ ಅಧ್ಯತೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಅನಂತ, ಅರುಣ್ ರಾವ್, ಚಂದ್ರು, ರಾಮೇಶ್ವರ ಕೂಡುಮಂಗಳೂರು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರಮೇಶ್, ತೊರೆನೂರು ಸಹಕಾರ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಕೆ.ಎಸ್. ಕೃಷ್ಣೇಗೌಡ, ರೈತ ಸಂಘದ ಸದಸ್ಯರು, ಸೇರಿದಂತೆ ಪಕ್ಷದ ಕಾರ್ಯಕರ್ತರು , ಗ್ರಾಮಸ್ಥರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!