- ಅಕ್ಟೋಬರ್ ೨೩ ರಿಂದ ಮೂರು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಕಿತ್ತೂರು ಉತ್ಸವ ಜರುಗಲಿದೆ.
ಕುಶಾಲನಗರ, ಅ 06: ಕಿತ್ತೂರು ಸ್ವಾತಂತ್ರ್ಯ ಸಂಗ್ರಾಮದ ಕಿತ್ತೂರು ಉತ್ಸವ ಪ್ರಯುಕ್ತ ‘ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರಾ’ ವಾಹನವನ್ನು ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶಿಲ್ದಾರ್ ಮಹೇಶ್, ಪೌರಾಯುಕ್ತರಾದ ವಿಜಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಇತರರು ಬುಧವಾರ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಬರಮಾಡಿಕೊಂಡರು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಿತ್ತೂರು ರಾಣಿ ಚೆನ್ನಮ್ಮ ಅವರ ಸ್ಮರಣಾರ್ಥ ಇದೇ ಅಕ್ಟೋಬರ್ ೨೩ ರಿಂದ ಮೂರು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಕಿತ್ತೂರು ಉತ್ಸವ ಜರುಗಲಿದೆ. ಆ ನಿಟ್ಟಿನಲ್ಲಿ ಕಿತ್ತೂರು ಚೆನ್ನಮ್ಮನ ವಿಜಯ ಜ್ಯೋತಿ ಯಾತ್ರ ವಾಹನವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ, ಸ್ವಾತಂತ್ರ್ಯ ಹೋರಾಟಕ್ಕೆ ಕಿತ್ತೂರು ಚೆನ್ನಮ್ಮನ ಕೊಡಗೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾಹಿತಿ ನೀಡಿದರು. ಯಾತ್ರಾ ನೋಡಲ್ ಅಧಿಕಾರಿ ವೆಂಕಟೇಶ ನಾಗನೂರ ಇತರರು ಇದ್ದರು.
Back to top button
error: Content is protected !!