ಕಾರ್ಯಕ್ರಮ

ಸುಂದರನಗರದ ವಾಲ್ಮೀಕಿ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಕುಶಾಲನಗರ, ಅ 09: ಕುಶಾಲನಗರ ತಾಲ್ಲೂಕು ಆಡಳಿತ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಹಾಗು ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ದಿ ಸಂಘದ ಸಂಯುಕ್ತಾಶ್ರಯದಲ್ಲಿ ಸುಂದರನಗರದ ವಾಲ್ಮೀಕಿ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು.
ಸೋಮವಾರಪೇಟೆ ತಾಲ್ಲೂಕು ತಹಸೀಲ್ದಾರ್ ನರಗುಂದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಆದರ್ಶ ಪ್ರಾಯರಾಗಿ ಬದುಕು ನೀಡಿ ಮರೆಯಾದ ಮಹನೀಯರ ಸಾಲಿನಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಯವರು ಸಮಾಜಕ್ಕೆ ಸಾರಿ ಹೋಗಿರುವ ಸಂದೇಶಗಳನ್ನು ನಾಡಿನ ಪ್ರತಿಯೊಬ್ಬರು ಪಾಲಿಸುವ ಮೂಲಕ ನಡೆ ಹಾಗು ನುಡಿಗಳಲ್ಲಿ ಶ್ರೇಷ್ಟತೆ ಸಾರಬೇಕೆಂದು ಕರೆಕೊಟ್ಟರು.
ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ ಮಾತನಾಡಿ ವಾಲ್ಮೀಕಿ ಮಹರ್ಷಿಗಳು ಬರೆದ ರಾಮಾಯಣ ಮಹಾಕಾವ್ಯ ವಿಶ್ವಕ್ಕೆ ನೀಡಿದ ಶ್ರೇಷ್ಟ ಸಾಹಿತ್ಯವಾಗಿದೆ ಎಂದರು.
ವಾಲ್ಮೀಕಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ಅಶೋಕ್ ಮಾತನಾಡಿ, ವಾಲ್ಮೀಕಿ ಜನಾಂಗದ ಶ್ರೇಯೋಭಿವೃದ್ದಿಗಾಗಿ ಹಿಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ಶ್ರಮದಿಂದ ರಾಜ್ಯದ ಪ್ರತೀ ಜಿಲ್ಲೆಯಲ್ಲೂ ವಾಲ್ಮೀಕಿ ಭವನ ನಿರ್ಮಿಸಿದ್ದನ್ನು ಸ್ಮರಿಸಿದರು.
ಹಾಗೆಯೇ ಸುಂದರನಗರದಲ್ಲಿ ನಿರ್ಮಿಸಿರುವ ವಾಲ್ಮೀಕಿ ಭವನಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಸಾಮಾಜಿಕ ಹಾಗು ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ಕಡಿಮೆ ವೆಚ್ಚದಲ್ಲಿ ದೊರಕುವಂತೆ ನೀಡುವಂತೆ ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಅಶೋಕ್ ಮನವಿ ಮಾಡಿದರು.
ಇದೇ ಸಂದರ್ಭ ವಾಲ್ಮೀಕಿ ಕ್ಷೇಮಾಭಿವೃದ್ದಿ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸುಂಟಿಕೊಪ್ಪದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಎ.ಎಸ್. ಶ್ರೀಷಾ ಮಹರ್ಷಿ ವಾಲ್ಮೀಕಿ ಅವರ ಕುರಿತಾಗಿ ಪ್ರಧಾನ ಭಾಷಣ ಮಾಡಿದರು.
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು, ಸುಂಟಿಕೊಪ್ಪ ನಾಢಕಛೇರಿ ಉಪ ತಹಸೀಲ್ದಾರ್ ಶಿವಪ್ಪ, ಕೃಷಿ ಇಲಾಖೆ ಅಧಿಕಾರಿ ಯಾದವ ಬಾಬು, ಮಡಿಕೇರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಾಲಕೃಷ್ಣ ರೈ, ಕುಶಾಲನಗರ ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಬಿ.ಸಿ.ಸ್ವಾಮಿ,
ನಿವೃತ್ತ ಐಎಫ್ ಎಸ್ ಅಧಿಕಾರಿ ಮರೂರು ಸಿದ್ದಪ್ಪ,
ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ.ಚೆಲುವರಾಜು, ಸದಸ್ಯರಾದ ಮಣಿಕಂಠ, ಹರಿಣಿ, ಗಣೇಶ, ವಾಲ್ಮೀಕಿ ಕ್ಷೇಮಾಭಿವೃದ್ದಿ ಸಂಘದ ನಿರ್ದೇಶಕರಾದ ವೈ.ಟಿ.ಪರಮೇಶ್, ಚಂದನಕುಮಾರ್, ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!