ಕಾರ್ಯಕ್ರಮ

ಕೊಡಗಿನಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಜಾಗೃತಿ: ಹಸಿರು ದೀಪಾವಳಿ ಆಚರಿಸಲು ಮನವಿ

ಕುಶಾಲನಗರ, ಅ 16:
ಕೊಡಗು ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಷ್ಟ್ರೀಯ
ಹಸಿರು ಪಡೆಯ ಇಕೋ ಕ್ಲಬ್ ಘಟಕ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಘಟಕ ಹಾಗೂ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿಯ ವತಿಯಿಂದ ಗುಡ್ಡೆಹೊಸೂರು ಬಳಿಯ ಬೊಳ್ಳೂರು ಉದ್ಗಮ್ ಶಾಲೆಯಲ್ಲಿ ಏರ್ಪಡಿಸಿದ್ದ ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಪರಿಸರ ಸ್ನೇಹಿ
ಹಸಿರು ದೀಪಾವಳಿ ಆಚರಣೆ ಕುರಿತು ಪರಿಸರ ಜಾಗೃತಿ ಆಂದೋಲನ ನಡೆಸಲಾಯಿತು.
ಹಸಿರು ದೀಪಾವಳಿ ಆಚರಣೆಗೆ ಚಾಲನೆ ನೀಡಿದ
ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ಸರ್ಕಾರದ
ಮಾರ್ಗಸೂಚಿಯಂತೆ
ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಶಾಲಾ ಇಕೋ ಕ್ಲಬ್ ಗಳ ಮೂಲಕ
ಬೆಳಕಿನ ಹಬ್ಬ ದೀಪಾವಳಿಯನ್ನು ಜಾಗರೂಕತೆ ಹಾಗೂ ಸುರಕ್ಷತೆಯಿಂದ
ಆಚರಿಸಬೇಕಿದೆ. ಈ
ದಿಸೆಯಲ್ಲಿ ಶಾಲಾ ಮಕ್ಕಳಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ. ಶಾಲಾ ಶಿಕ್ಷಕರು ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳ ಬಗ್ಗೆ
ಮಕ್ಕಳಿಗೆ ಅರಿವು ಮೂಡಿಸಬೇಕು ಎಂದರು.
ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ
ರಾಷ್ಟ್ರೀಯ
ಹಸಿರು ಪಡೆಯ ಇಕೋ ಕ್ಲಬ್ ಘಟಕದ ಕೊಡಗು ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ನಾವು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಣತೆ ಬೆಳಗಿಸುವ ಮೂಲಕ
ಪಟಾಕಿ ಮುಕ್ತ ಹಾಗೂ ಮಾಲಿನ್ಯ ದೀಪಾವಳಿ ಆಚರಿಸುವ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಪಟಾಕಿ ಹಿಡಿತದಿಂದ ಹೊರಸೂಸುವ ವಿಷಯುಕ್ತ ಅನಿಲದಿಂದ ಪರಿಸರ ಮಾಲಿನ್ಯ ಉಂಟಾಗಿ ಜನರು ಮತ್ತು ಜೀವಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗುತ್ತದೆ ಎಂದರು.
ಮಕ್ಕಳು ಪಟಾಕಿ ಖರೀದಿ ಬದಲು ಆ ಹಣವನ್ನು ಪುಸ್ತಕ ಹಾಗೂ ಬಟ್ಟೆ ಖರೀದಿ ಸೇರಿದಂತೆ ಉಪಯುಕ್ತ ಕಾರ್ಯಗಳಿಗೆ ಬಳಸುವಂತೆ ಮಕ್ಕಳು ಸಂಕಲ್ಪ ಹೊಂದಬೇಕು ಎಂದು ಟಿ.ಜಿ.ಪ್ರೇಮಕುಮಾರ್ ಹೇಳಿದರು.
ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ. ಎಂ.ಎನ್.
ವೆಂಕಟನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ 12 ವರ್ಷಗಳಿಂದ ಶಿಕ್ಷಣ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ವಿಜ್ಞಾನ ಪರಿಷತ್ತು
ವತಿಯಿಂದ ಜಿಲ್ಲೆಯಲ್ಲಿ
ಕಳೆದ 12 ವರ್ಷಗಳಿಂದ ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಡಿಡಿಪಿಐ ಕಛೇರಿಯ ಶಿಕ್ಷಣಾಧಿಕಾರಿ
ಡಾ ದೊಡ್ಡೇಗೌಡ, ಸಮಗ್ರ ಶಿಕ್ಷಣ ಕರ್ನಾಟಕ ದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಜಿ.ಎಂ.ಹೇಮಂತ್, ಸಂಪನ್ಮೂಲ ವ್ಯಕ್ತಿಗಳಾದ
ಎಸ್.ಎನ್.ಲೋಕೇಶ್,
ಕೆ.ಬಿ.ರಾಧಾಕೃಷ್ಣ,
ಉದ್ಗಮ್ ಶಾಲೆಯ ಪ್ರಾಂಶುಪಾಲ ಬಿ.ಪಿ.
ಬೋಪಣ್ಣ,
ಟ್ರಸ್ಟಿ ಮುತ್ ಬೋಪಣ್ಣ, ತಾಲ್ಲೂಕಿನ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದೇ ವೇಳೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತ ಭಿತ್ತಿ ಫಲಕಗಳನ್ನು ಹಿಡಿದ ಮುಖ್ಯ ಶಿಕ್ಷಕರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಸಿರು ದೀಪಾವಳಿ ಆಚರಣೆ ಕುರಿತು ಪರಿಸರ ಘೋಷಣೆಗಳನ್ನು ಕೂಗಿದರು.
ಹಸಿರೇ ಉಸಿರು,
ಹಣತೆ ಬೆಳೆಗಿಸಿ – ದೀಪಾವಳಿ ಆಚರಿಸಿ,
ಪಟಾಕಿ ತ್ಯಜಿಸಿ – ಮಾಲಿನ್ಯ ತಡೆಯಿರಿ, ಪಟಾಕಿ ತ್ಯಜಿಸಿ – ಪರಿಸರ ಸಂರಕ್ಷಿಸಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗುವ ಮೂಲಕ ಜನಜಾಗೃತಿ ಮಂಡಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!