ಕುಶಾಲನಗರ, ಅ 17: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್, 21 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ಮೆಡ್‍ಪ್ಲಸ್, ಮಂಗಳೂರು, ರಾಣಿ ಮದ್ರಾಸ್ ಪ್ರೈ.ಲಿ., ಮೈಸೂರು, ಜಸ್ಟ್ ಡಯಲ್, ಬೆಂಗಳೂರು, ಈಕ್ವಲೈಜರ್ ಆರ್‍ಎಂಸಿ ಪ್ರೈ.ಲಿ., ಮೈಸೂರು, ಸ್ನೈದರ್ ಎಲೆಕ್ಟ್ರಿಕ್ಟ್ ಇಂಡಿಯಾ ಪ್ರೈ.ಲಿ. ಮೈಸೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
Back to top button
error: Content is protected !!