ಕಾರ್ಯಕ್ರಮ
ಮಳೆಯಿಂದಾಗಿ ಮನೆ ಕುಸಿತ: ಸ್ಥಳ ಪರಿಶೀಲಿಸಿದ ಗ್ರಾಪಂ ಅಧ್ಯಕ್ಷೆ

ಕುಶಾಲನಗರ ಅ 20: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಂದರನಗರ ಗ್ರಾಮ ಲಕ್ಕಯ್ಯ ಎಂಬುವರಿಗೆ ಸೇರಿದ ವಾಸದ ಮನೆಯ ಗೋಡೆ ಅತಿಯಾದ ಮಳೆಯಿಂದಾಗಿ ಕುಸಿತಗೊಂಡಿದೆ.
ಸ್ಧಳಕ್ಕೆ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಲೆಕ್ಕಾಧಿಕಾರಿ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರವನ್ನು ನೀಡುವ ಭರವಸೆಯನ್ನು ನೀಡಿರುತ್ತಾರೆ.



