ಕುಶಾಲನಗರ, ಅ 27:
ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಸಂಬಂಧ ಪವಿತ್ರ ಮೃತ್ತಿಕೆ ಸಂಗ್ರಹಣೆ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪವಿತ್ರ ಮೃತ್ತಿಕೆ ಸಂಗ್ರಹಣೆ ಮಾಡುವ ಕಾರ್ಯಕ್ಕೆ ಜಿಲ್ಲಾಡಳಿತ ಭವನ ಆವರಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಿಂದ ಪವಿತ್ರ ಮೃತ್ತಿಕೆ ಸಂಗ್ರಹಣೆಗೆ ಚಾಲನೆ ನೀಡಿದರು.
ಬಳಿಕ ಗಾಳಿಬೀಡು, ಕೆ.ನೀಡುಗಣೆ, ಮೇಕೇರಿ, ಹಾಕತ್ತೂರು, ಹೊಸ್ಕೇರಿ, ಮರಗೋಡು, ಕಾಂತೂರು ಮೂರ್ನಾಡು, ಹೊದ್ದೂರು, ನಾಪೋಕ್ಲು, ಕೊಣಂಜಗೇರಿ, ನರಿಯಂದಡ, ಕಕ್ಕಬ್ಬೆ, ಎಮ್ಮೆಮಾಡು, ಬಲ್ಲಮಾವಟಿ, ಅಯ್ಯಂಗೆರಿ.
ಹಾಗೆಯೇ ಅಕ್ಟೋಬರ್ 28 ರಂದು ಬೆಟ್ಟಗೇರಿ, ಬೇಂಗೂರು, ಕುಂದಚೇರಿ, ಭಾಗಮಂಡಲ, ಕರಿಕೆ, ಪೆರಾಜೆ, ಚೆಂಬು, ಸಂಪಾಜೆ, ಮದೆ, ಕಡಗದಾಳು, ಮಕ್ಕಂದೂರು ಗ್ರಾಮ ಪಂಚಾಯಿತಿಗಳಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹಣೆ ನಡೆಯಲಿದೆ.
ಈ ಸಂದರ್ಭ ಶಾಸಕರಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ,
ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ ಸೇರಿದಂತೆ ಮತ್ತಿತರ ಅಧಿಕಾರಿಗಳು ಇದ್ದರು.
Back to top button
error: Content is protected !!