ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘಕ್ಕೆ ಆಯ್ಕೆ :
ಅಧ್ಯಕ್ಷರಾಗಿ ಜಿ.ಎಂ.ಹೇಮಂತ್ ಆಯ್ಕೆ :
ಕುಶಾಲನಗರ, ಅ 29: ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ನೂತನ
ಅಧ್ಯಕ್ಷರಾಗಿ ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಎಂ.ಹೇಮಂತ್ ಹಾಗೂ ಉಪಾಧ್ಯಕ್ಷರಾಗಿ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕೆ.ಇಂದಿರಾ
ಆಯ್ಕೆಯಾಗಿದ್ದಾರೆ.
ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿಯ ಬಳ್ಳೂರು ಉದ್ಗಮ್ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿಯಾಗಿ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಪ್ರಕಾಶ್ ಹಾಗೂ ಖಜಾಂಚಿಯಾಗಿ
ಏಳನೇ ಹೊಸಕೋಟೆ
ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸೋಮಯ್ಯ
ಆಯ್ಕೆಯಾದರು.
ಸಂಘದ ನಿರ್ದೇಶಕರಾಗಿ ಸರ್ಕಾರಿ ಪ್ರೌಢಶಾಲೆಗಳ ವಿಭಾಗದಿಂದ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಕೃಷ್ಣೇಗೌಡ, ಮಾದಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪಾಲಾಕ್ಷ, ಕುಶಾಲನಗರ ಬಾಲಕಿಯರ
ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ ಆಯ್ಕೆಯಾಗಿದ್ದಾರೆ.
ಅನುದಾನ ಪ್ರೌಢಶಾಲೆಯ ಪರವಾಗಿ ಕುಶಾಲನಗರ ಫಾತಿಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಫ್ರಿ ಡಿ’ಸಿಲ್ವ, ನಂಜರಾಯಪಟ್ಟಣ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಚ್.ಬಿ.ಮೂರ್ತಿ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳ ಪರವಾಗಿ ಕುಶಾಲನಗರ ಫಾತಿಮ ಕಾನ್ವೆಂಟ್ ನ
ಮುಖ್ಯ ಶಿಕ್ಷಕಿ ಸಿಸ್ಟರ್ ತೆರೇಸಾ ಆ್ಯನ್ ಆಯ್ಕೆಯಾಗಿದ್ದಾರೆ.
ಈ ಆಯ್ಕೆ ಸಂದರ್ಭದಲ್ಲಿ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ಶಿಕ್ಷಕರ ಸಂಘಟನೆಗಳು ಶಿಕ್ಷಣ ಇಲಾಖೆಯೊಂದಿಗೆ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಶಾಲೆಗಳ ಪ್ರಗತಿಗೆ ಸಹಕರಿಸಬೇಕು ಎಂದರು.
ಡಿಡಿಪಿಐ ಕಛೇರಿಯ ಶಿಕ್ಷಣಾಧಿಕಾರಿ ಡಾ ದೊಡ್ಡೇಗೌಡ, ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಸಂಪನ್ಮೂಲ ಶಿಕ್ಷಕರಾದ ಕೆ.ಬಿ.ರಾಧಾಕೃಷ್ಣ ಹಾಗೂ ಎಸ್.ಎನ್.ಲೋಕೇಶ್ ಇದ್ದರು.
ಮುಖ್ಯ ಶಿಕ್ಷಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳನ್ನು ಮುಖ್ಯ ಶಿಕ್ಷಕರು ಅಭಿನಂದಿಸಿದರು.
Back to top button
error: Content is protected !!