ಕುಶಾಲನಗರ, ಮಾ 06: ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ವಿಸ್ತರಣಾ ಶಿಕ್ಷಣ ಘಟಕ, ಮಡಿಕೇರಿ ಮತ್ತು ಕೃಷಿ ಇಲಾಖೆ, ಕೊಡಗು ಜಿಲ್ಲೆ ಸಹಯೋಗದಲ್ಲಿ ಅತ್ಮಾ (ATMA) ಯೋಜನೆಯಡಿಯಲ್ಲಿ ಕಲ್ಲಂಗಡಿ ಬೆಳೆಯ ಕ್ಷೇತ್ರೋತ್ಸವ ಮತ್ತು ಜೇನು ಕೃಷಿಯ ಕುರಿತ ತರಬೇತಿ ಕಾರ್ಯಕ್ರಮ ಮಣಜೂರಿನ ರೈತ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಡಾ. ಚಂದ್ರಶೇಖರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಡಾ. ಶಶಿಧರ್,ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಶಿವಕುಮಾರ್, ಡಾ. ವೀರೇಂದ್ರ ಕುಮಾರ್, ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಡಾ. ರಾಣಿ ಮತ್ತಿತರರು ಭಾಗವಹಿಸಿದ್ದರು.
Back to top button
error: Content is protected !!