ಅಪಘಾತ

ಲಾರಿ-ಬೈಕ್ ಡಿಕ್ಕಿ: ಸವಾರ ದುರ್ಮರಣ

ಕುಶಾಲನಗರ, ಅ:31 ಬೈಕ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಪಿರಿಯಾಪಟ್ಟಣ ತಾಲ್ಲೂಕಿನ ಹೊನ್ನಾಪುರ ಗ್ರಾಮದ ಧನಂಜಯ(28) ಎಂಬ ಯುವಕ ಸ್ಧಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಹೆಬ್ಬಾಲೆ ಮತ್ತು ಹುಲುಸೆ ಗ್ರಾಮದ ಮದ್ಯಭಾಗದ ಹಾಸನ ಹೆದ್ದಾರಿ ಯಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಬೈಕ್ ಸವಾರ ಲಾರಿಯ ಹಿಂದಿನ ಚಕ್ರದ ಕಬ್ಬಿಣದ ರಾಡ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆಯ ಬದಿಗೆ ಎಸೆಯಲ್ಪಟ್ಟು ಸ್ಧಳದಲ್ಲಿ ಸಾವನ್ನಪ್ಪಿದ್ದಾನೆ. ಕುಶಾಲನಗರ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!