ಎನ್ನೆಸ್ಸೆಸ್ ನಿಂದ ಉತ್ತಮ ವ್ಯಕ್ತಿತ್ವ, ಸೇವಾ ಮನೋಭಾವ ಬೆಳೆಸಲು ಸಾಧ್ಯ : ಡಾ ಪೂರ್ಣಿಮ ಜೋಗಿ :
ಕುಶಾಲನಗರ, ನ.5 : ರಾಷ್ಟ್ರೀಯ ಸೇವಾ ಯೋಜನೆ( ಎನ್.ಎಸ್.ಎಸ್.) ಯು ಶಾಲಾ – ಕಾಲೇಜು
ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಸೇವಾ ಮನೋಭಾವ ಬೆಳೆಸುವುದರೊಂದಿಗೆ ಅವರಲ್ಲಿ ಉತ್ತಮ ನಾಯಕತ್ವ ಹಾಗೂ
ವ್ಯಕ್ತಿತ್ವವನ್ನು ಬೆಳೆಸಲು ಉತ್ತಮ ಅವಕಾಶ ಕಲ್ಪಿಸುತ್ತದೆ ಎಂದು ರಾಜ್ಯ ಎನ್ನೆಸ್ಸೆಸ್ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ ಪೂರ್ಣಿಮಾ ಜೋಗಿ ಹೇಳಿದರು.
ಸಾರ್ವಜನಿಕ ಸೇವೆಯ ಮೂಲಕ ಅಭಿವೃದ್ಧಿಗೊಳಿಸುವುದಾಗಿದೆ. ಈ ಸ್ವಯಂಪ್ರೇರಿತ ಸಂಸ್ಥೆಯ ಮೂಲತತ್ವವು ವಿದ್ಯಾರ್ಥಿಗಳಿಗೆ ಲೋಕಸೇವೆಯ ಮೂಲಕ ರಾಷ್ಟ್ರನಿರ್ಮಾಣದ ಕಾರ್ಯಗಳಲ್ಲಿ ಒಳಗೊಂಡಂತಹ ಅನುಭವವನ್ನು ನೀಡುವುದು, ಹಾಗೂ ಇದರೊಂದಿಗೆ ರಾಷ್ಟ್ರಪ್ರೇಮ ಮತ್ತು ಸೇವಾ ಭಾವನೆಗಳನ್ನು ಬೆಳೆಸುವುದಾಗಿದೆ ಎಂದರು.
ಉತ್ತರ ಕೊಡಗಿನ
ಕುಶಾಲನಗರ ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ( ನ.4 ರಂದು)
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಎನ್.ಎಸ್.ಎಸ್.ಜಿಲ್ಲಾ ಘಟಕದ ವತಿಯಿಂದ ಸರ್ಕಾರಿ ಪ್ರೌಢಶಾಲೆಗಳ
ಎನ್ನೆಸ್ಸೆಸ್ ಘಟಕಗಳ ಅನುಷ್ಠಾನಾಧಿಕಾರಿಗಳಿಗೆ
ಏರ್ಪಡಿಸಿದ್ದ
ಎನ್ನೆಸ್ಸೆಸ್ ಕಾರ್ಯಾಗಾರವನ್ನು
ಉದ್ಘಾಟಿಸಿ
ಎನ್.ಎಸ್.ಎಸ್.ಕಾರ್ಯ ಚಟುವಟಿಕೆಗಳ ಕುರಿತು
ಮಾಹಿತಿ ನೀಡಿದರು.
ಎನ್ನೆಸ್ಸೆಸ್ ಎಂದರೆ ‘ನಾನು ಸೇವೆಗಾಗಿ ಸದಾ ಸಿದ್ಧ’ ಎಂದು. ‘ಎನ್.ಎಸ್.ಎಸ್.ನವರು ದೇಶ ಕಟ್ಟುತ್ತಾರೆ’.ಎನ್.ಎಸ್.ಎಸ್.ನವರದು ‘ಕಟ್ಟುವ ಮತ್ತು ಮೆತ್ತುವ ಕೆಲಸ’. ಇದರಿಂದ ಶ್ರಮದ ಮಹತ್ವ ವಿದ್ಯಾರ್ಥಿಗಳಿಗೆ ತಿಳಿಯುತ್ತದೆ ಎಂದರು.
ರಾಷ್ಟ್ರದ ಬೆಳವಣಿಗೆಯಲ್ಲಿ ಎನ್‌ಎಸ್‌ಎಸ್ ಪಾತ್ರ
ವಿದ್ಯಾರ್ಥಿಗಳು ಎನ್‌ಎನ್‌ಎಸ್ ಸೇರುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದು ಡಾ ಪೂರ್ಣಿಮಾ ಜೋಗಿ ಹೇಳಿದರು.
ವಿದ್ಯಾರ್ಥಿಗಳಿಗೆ ಭವಿಷ್ಯದ ಕುರಿತು ಸಾಮಾಜಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಎನ್‌ಎಸ್‌ಎಸ್ ಕಲಿಸುತ್ತದೆ. ಉತ್ತಮ ನಾಗರಿಕನನ್ನಾಗಿ ರೂಪಿಸುತ್ತದೆ. ಎನ್‌ಎಸ್‌ಎಸ್ ಮೂಲಕ ವಿದ್ಯಾರ್ಥಿಗಳು ಶಿಸ್ತು, ದೈಹಿಕವಾಗಿ ಮತ್ತು ಮಾನಸಿಕವಾಗಿ ಶಕ್ತರಾಗುತ್ತಾರೆ ಎಂದರು.
ಸಂಪನ್ಮೂಲ ವ್ಯಕ್ತಿ ಚಿತ್ರದುರ್ಗದ ಡಾ ತಿಮ್ಮಣ್ಣ, ಎನ್ನೆಸ್ಸೆಸ್ ಚಟುವಟಿಕೆಗಳ ಮೂಲಕ ಗ್ರಾಮೀಣ ಜನಪದ ಕಲೆ, ಸಾಹಿತ್ಯ ಹಾಗೂ ಗ್ರಾಮೀಣ ಸೊಗಡನ್ನು ಪ್ರತಿಬಿಂಬಿಸುತ್ತವೆ ಎಂದರು.
ಎನ್ನೆಸ್ಸೆಸ್ ಮೂಲಕ ಹಳ್ಳಿಗಳಲ್ಲಿ ಶೌಚಾಲಯಗಳ ನಿರ್ಮಾಣ, ಜಲ ಸಂರಕ್ಷಣೆ, ಸ್ವಚ್ಛ ಭಾರತ ಅಭಿಯಾನ ಮತ್ತು ನಿಸರ್ಗದ ಕಾಳಜಿ ಸೇರಿದಂತೆ ಅನೇಕ ಜನರಲ್ಲಿ ಅರಿವು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಸಂಘಟಿಸಬಹುದು ಎಂದರು.
ಎನ್ನೆಸ್ಸೆಸ್ ಚಟುವಟಿಕೆಗಳ ಮೂಲಕ ಗ್ರಾಮೀಣ ಜನಪದ ಕಲೆ, ಸಾಹಿತ್ಯ ಹಾಗೂ ಗ್ರಾಮೀಣ ಸೊಗಡನ್ನು ಪ್ರತಿಬಿಂಬಿಸುತ್ತವೆ ಎಂದು ಡಾ ತಿಮ್ಮಣ್ಣ ಹೇಳಿದರು.
ಕೊಡಗು ಜಿಲ್ಲೆಯಲ್ಲಿ
ಎನ್ನೆಸ್ಸೆಸ್ ಕಾರ್ಯಕ್ರಮ/ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ
ಎನ್ನೆಸ್ಸೆಸ್ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿ
ಡಾ ಸದಾಶಿವಯ್ಯ ಎಸ್. ಪಲ್ಲೇದ್ ಮಾತನಾಡಿ, ಎನ್ನೆಸ್ಸೆಸ್ ಎನ್ನೆಸ್ಸೆಸ್ ಘಟಕಗಳ ಮೂಲಕ ಶಾಲೆಗಳಲ್ಲಿ ಸಂಘಟಿಸಬೇಕಾದ
ವಿವಿಧ ಕಾರ್ಯಕ್ರಮಗಳು ಹಾಗೂ
ಸಾಮಾಜಿಕ ಸೇವಾ ಚಟುವಟಿಕೆಗಳ ಕುರಿತು ವಿವರಿಸಿದರು.
ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿಯೂ ಆದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ
ಸಿ.ಟಿ.ಸೋಮಶೇಖರ್ ಮಾತನಾಡಿ, ಎನ್ನೆಸ್ಸೆಸ್ ಘಟಕಗಳನ್ನು ಪ್ರೌಢಶಾಲೆಗಳಲ್ಲಿ ಆರಂಭಿಸಿರುವುದು ಮಕ್ಕಳು ಪ್ರೌಢಾವಸ್ಥೆಯಲ್ಲಿ ತಮ್ಮನ್ನು ಹೆಚ್ಚು ಉತ್ಸುಕತೆಯಿಂದ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಿವೆ ಎಂದರು.
ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ
ಎಸ್.ಟಿ.ವೆಂಕಟೇಶ್, ಎನ್ನೆಸ್ಸೆಸ್ ಘಟಕಗಳಲ್ಲಿ ದಾಖಲೆಗಳು ಮತ್ತು ಕಾರ್ಯಕ್ರಮಗಳ ವರದಿ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಉಪ ಪ್ರಾಂಶುಪಾಲ ವೈ.ಎಸ್.ಪರಮೇಶ್ವರಪ್ಪ ಮಾತನಾಡಿದರು.
ಎನ್ನೆಸ್ಸೆಸ್ ಕಾರ್ಯಕ್ರಮ ಅಧಿಕಾರಿ ಎ.ಎ.ಲಕ್ಷ್ಮಣ್,
ಶಿಕ್ಷಕರಾದ ಎ.ಸಿ.ಮಂಜುನಾಥ್,
ಎಂ.ಎಸ್.ಮಹೇಂದ್ರ,
ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಗಾಯಿತ್ರಿ, ಸುಕುಮಾರಿ, ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಇದ್ದರು.
ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಸ್ವಾಗತಿಸಿದರು. ಶಿಕ್ಷಕಿ ಎಂ.ಎಲ್.ರಶ್ಮಿ ನಿರ್ವಹಿಸಿದರು. ಶಿಕ್ಷಕಿ ಅನಿತಾ ವಂದಿಸಿದರು. ವಿದ್ಯಾರ್ಥಿಗಳು ಎನ್ನೆಸ್ಸೆಸ್ ಗೀತೆ ಹಾಡಿದರು.
ಕಾರ್ಯಗಾರದಲ್ಲಿ ಎನ್ನೆಸ್ಸೆಸ್ ಘಟಕ ಹೊಂದಿರುವ
ವಿವಿಧ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿಗಳು ಇದ್ದರು.
-+++++++++++++