ಕುಶಾಲನಗರ, ನ 08 ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಪಂ ವ್ಯಾಪ್ತಿಯ 144 ಮಂದಿ ಫಲಾನುಭವಿಗಳಿಗೆ ಕಂದಾಯ ಇಲಾಖೆಯ ವತಿಯಿಂದ ನೀಡಲಾಗುವ ಹಕ್ಕು ಪತ್ರವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಿತರಣೆ ಮಾಡಿದರು.
ಕುಶಾಲನಗರ ತಾಲ್ಲೂಕು ತಹಶೀಲ್ದಾರ್
ಕಛೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು,
ತಾಲ್ಲೂಕಿನ ಆರು ಸಾವಿರಕ್ಕೂ ಅಧಿಕ ಮನೆಗಳಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗಿದೆ. ಇನ್ನೂ ಉಳಿದವರಿಗೆ ಅರ್ಜಿಗಳ ಅನುಗುಣವಾಗಿ ಅಧಿಕಾರಿಗಳು ಸ್ಥಳ ಪರಿಶೀಲನೆಯ ನಂತರ ವಿತರಣೆ ಮಾಡಲಾಗುವುದು. ಹಕ್ಕು ಪತ್ರವನ್ನು ಪಡೆದವರು ಯಾರು ಪರಭಾರೆ ಮಾಡಬಾರದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಜೈವರ್ಧನ್ ವಹಿಸಿದ್ದರು. ವೇದಿಕೆಯಲ್ಲಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಸುರಯ್ಯಭಾನು, ತಾಲ್ಲೂಕು ಒತ್ತುವರಿ ಸಮಿತಿಯ ಸದಸ್ಯರಾದ ಕುಮಾರಪ್ಪ, ಕೆಂಜೇಶ್ವರ, ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಕಂದಾಯ ನಿರೀಕ್ಷಕ ಸಂತೋಷ್ ಸೇರಿದಂತೆ ಅಯಾ ಗ್ರಾಮ ವ್ಯಾಪ್ತಿಯ ಲೆಕ್ಕಾಧಿಕಾರಿಗಳು ಹಾಜರಿದ್ದರು.
Back to top button
error: Content is protected !!