ಕಾರ್ಯಕ್ರಮ

ಕುಶಾಲನಗರ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಹೆಚ್ಚುವರಿ‌ ಕೊಠಡಿ ಉದ್ಘಾಟಿಸಿದ ಶಾಸಕರು

ಕುಶಾಲನಗರ, ನ 09:
ಕುಶಾಲನಗರ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸೇರ್ಪಡೆ ಮಾರ್ಪಾಡು ಯೋಜನೆಯಡಿ ರೂ.15.75 ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ಕೊಠಡಿಯನ್ನು ಮಂಗಳವಾರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕರು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಸರ್ಕಾರ ವಿಶೇಷ ಒತ್ತು ನೀಡಿದೆ. ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದ್ದು,ಈ ಎಲ್ಲ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.
ಪ.ಪಂ.ಅಧ್ಯಕ್ಷ ಬಿ.ಜೈವರ್ಧನ್ ಮಾತನಾಡಿ,ವಿದ್ಯಾರ್ಥಿಗಳು ಓದಿನ‌ ಕಡೆಗೆ ಹೆಚ್ಚಿನ ಒತ್ತು ನೀಡಬೇಕು.ಉತ್ತಮ ಫಲಿತಾಂಶ ತಂದು ಶಾಲೆಗೆ ಹಾಗೂ ಪೋಷಕರರಿಗೆ ಕೀರ್ತಿ ತರಬೇಕು ಎಂದರು.
ಈ ಸಂದರ್ಭ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ,ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್,ಮುಖ್ಯ ಶಿಕ್ಷಕಿ ಪುಷ್ಪಾ ಹಾಗೂ ಶಿಕ್ಷಕರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!