ಕುಶಾಲನಗರ, ನ 11: ನಾಡು ಕಂಡ ಶ್ರೇಷ್ಠ ದಾರ್ಶನಿಕ ಕನಕದಾಸರು 15 ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಕ್ರಾಂತಿ ಮಾಡುವ ಮೂಲಕ ಕುಲ ಕುಲ ಕುಲ ಎಂದು ಹೊಡೆದಾಡದಿರಿ ಎಂದು ಸಮಾಜಕ್ಕೆ ಸಂದೇಶ ನೀಡಿದ ಮಹಾನ್ ದಾರ್ಶನಿಕ ಎಂದು ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್ ಬಣ್ಣಿಸಿದರು.
ಕೊಡಗು ಜಿಲ್ಲಾಡಳಿತದ ವತಿಯಿಂದ ಕುಶಾಲನಗರದ ವಾಲ್ಮೀಕಿ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಭಕ್ತ ಕನಕ ದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಪ್ರತಿಯೊಬ್ಬರು ಕನಕದಾಸರಂತಹ ಶ್ರೇಷ್ಠ ದಾರ್ಶನಿಕರ ಚಿಂತನೆಗಳನ್ನು ಮೈಗೂಡಿಸಿಕೊಂಡು ಉತ್ತಮವಾದ ಸಮಾಜ ಕಟ್ಟಬೇಕಿದೆ ಎಂದರು.
ಮುಖ್ಯ ಭಾಷಣಕಾರರಾಗಿದ್ದ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಉಪನ್ಯಾಸಕ ಮೆ.ನಾ.ವೆಂಕಟನಾಯಕ್ ಮಾತನಾಡಿ, ಈ ನಾಡಿಗೆ ದಾಸ ಪರಂಪರೆಯ ಕೊಡುಗೆ ಅಪಾರವಾದುದು.
ಭಕ್ತ ಕನಕದಾಸ ಹಾಗು ಪುರಂದರದಾಸರ ಕೀರ್ತನೆಗಳು ಹಾಗು ಭಾಮಿನಿ ಷಟ್ಪದಿಗಳ ಮೂಲಕ ಸಮಾಜಕ್ಕೆ ಸಾರಿದ ಸಂದೇಶಗಳು ಎಂದೆಂದಿಗು ಪ್ರಸ್ತುತ.
ಕನಕದಾಸರ ಚಿಂತನೆಗಳನ್ನು ಮಕ್ಕಳ ಮೂಲಕ ಸಮಾಜಕ್ಕೆ ಹೆಚ್ಚು ಹೆಚ್ಚಾಗಿ ಪಸರಿಸುವ ಕೆಲಸವಾಗಬೇಕಿದೆ ಎಂದು ವೆಂಕಟನಾಯಕ್ ಹೇಳಿದರು.
ಕುಶಾಲನಗರ ಪಪಂ ಅಧ್ಯಕ್ಷ ಬಿ.ಜೈವರ್ಧನ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿದರು.
ಕೊಡಗು ಜಿಲ್ಲಾ ಸಹಾಯಕ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಕುಶಾಲನಗರ ತಾಲ್ಲೂಕು ತಹಸೀಲ್ದಾರ್ ಟಿ.ಎಂ.ಪ್ರಕಾಶ್, ಸೋಮವಾರಪೇಟೆ ತಾಲ್ಲೂಕು ತಹಸೀಲ್ದಾರ್ ನರಗುಂದ,
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲ್ಲೂಕು ಯೋಜನಾಧಿಕಾರಿ ಸಿ.ಎಂ.ಅಣ್ಣಯ್ಯ, ಬಿಸಿಎಂ ಇಲಾಖೆಯ ಮೋಹನಕುಮಾರ್, ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಆರ್. ಪ್ರಭಾಕರ್, ಮಹಿಳಾ ಘಟಕದ ಅಧ್ಯಕ್ಷೆ ಹೇಮಲತಾ ಮತ್ತಿತರರು ಇದ್ದರು.
ಸಮುದಾಯದಲ್ಲಿನ ಹತ್ತನೆ ತರಗತಿ ಹಾಗು ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕಗಳನ್ನು ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕೊಡಗು ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ವತಿಯಿಂದ ವಿದ್ಯಾರ್ಥಿಗಳಿಗೆ ಡಿಕ್ಷನರಿ ಕೊಡುಗೆ ನೀಡಲಾಯಿತು.
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ,
ಮಣಜೂರು ಮಂಜುನಾಥ್, ಕಲಾವಿದ ಬಿ.ಸಿ.ಶಂಕರಯ್ಯ,
ಸಮುದಾಯದ ಪ್ರಮುಖರಾದ ಮಂಜುನಾಥ, ಮಲ್ಲೇಶ್, ಭರ್ಮಣ್ಣ ಬೆಟ್ಟಗೇರಿ, ಪುಟ್ಟಸ್ವಾಮಿ, ಮೋಹನ, ಕೆ.ಆರ್.ರವಿ, ಕುಮಾರ್, ದಿ.ಕೆ. ಉದಯಕುಮಾರ್,ಮಹೇಶ್, ಧರ್ಮ ಇದ್ದರು.
Back to top button
error: Content is protected !!