ಕುಶಾಲನಗರ, ನ 11: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಿಬ್ಬಂದಿಗಳ ತಂಡ ಮುಳ್ಳುಸೋಗೆ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಸಂಪೂರ್ಣವಾದ ಮಾಹಿತಿಯನ್ನು ಪಡೆದರು
ಗ್ರಾಮ ಪಂಚಾಯತಿ ವತಿಯಿಂದ ನೀಡಲಾಗುತ್ತಿರುವ ಆನ್ಲೈನ್ ಸೇವೆಗಳು, ಡಿಜಿಟಲ್ ಗ್ರಂಥಾಲಯ , ಮಕ್ಕಳ ಒಳಾಂಗಣ ಕ್ರೀಡಾಂಗಣ, ಮತ್ತಿತರ ವಿನೂತನ ಕಾರ್ಯಕ್ರಮಗಳ ಬಗ್ಗೆ ತಂಡವು ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿತು. ಇದರ ಜೊತೆಯಲ್ಲಿ ಸ್ವಚ್ಚತಾ ಕಾರ್ಯಗಳ ಯೋಜನೆಗಳ ಬಗ್ಗೆ ಮತ್ತು ತಾಯಂದಿರ ಮಕ್ಕಳ ಆರೋಗ್ಯ ಕೇಂದ್ರದ ಬಗ್ಗೆ, ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕೈಗೊಂಡ ಪ್ರಗತಿ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡರು.
ಈ ಸಂದರ್ಭ ಮುಳ್ಳುಸೋಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಚೆಲುವರಾಜ್, ಸೇರಿದಂತೆ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸುಮೇಶ್ ಹಾಜರಿದ್ದರು.
Back to top button
error: Content is protected !!