ಕಾರ್ಯಕ್ರಮ

ಕರ್ನಾಟಕ ಕಾವಲುಪಡೆಯ 12ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಕುಶಾಲನಗರ, ನ 16: ಕರ್ನಾಟಕ ಕಾವಲುಪಡೆ ಆಶ್ರಯದಲ್ಲಿ ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಸಂಘಟನೆಯ 12ನೇ ವಾರ್ಷಿಕೋತ್ಸವ ಕಾರ್ಯಕ್ರಮ ಬುಧವಾರ ನಡೆಯಿತು.
ಕರ್ನಾಟಕ ಕಾವಲುಪಡೆ ರಾಜ್ಯಾಧ್ಯಕ್ಷ ಎಂ.ಮೋಹನ್ ಕುಮಾರ್ ಗೌಡ ಅವರು ಕನ್ನಡಾಂಬೆ, ಪುನಿತ್ ರಾಜ್ ಕುಮಾರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ
ಕಾರ್ಯಕ್ರಮ ಉದ್ಘಾಟಿಸಿದರು.
ಕಾವಲುಪಡೆ ರಾಜ್ಯ ಕಾರ್ಯದರ್ಶಿ ಕರಿಗೌಡ್ರು ಪ್ರಾಸ್ತಾವಿಕ ನುಡಿಗಳಾಡಿ, ಕಾವಲುಪಡೆಯ ಉಗಮ‌ ಹಾಗೂ ಹೋರಾಟಗಳ ಬಗ್ಗೆ ಮಾಹಿತಿ‌ ನೀಡಿದರು.
ಸೋಮವಾರಪೇಟೆ ತಾಲೂಕು ಅಬಕಾರಿ ಇಲಾಖೆ ಉಪ ಅಧೀಕ್ಷಕಿ ಆರ್.ಎಂ.ಚೈತ್ರ ಅವರು ಮಾತನಾಡಿ, ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.
ಕೊಡಗು ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸಲು ಕನ್ನಡಪರ ಸಂಘಟನೆಗಳ ಹೋರಾಟ ಹಮ್ಮಿಕೊಳ್ಳುವ, ಪರದಾಡುವ ಪರಿಸ್ಥಿತಿ‌ ನಿರ್ಮಾಣಗೊಂಡಿರುವುದು ವಿಪರ್ಯಾಸ ಎಂದರು.
ಕಾವಲುಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ, ಕುಶಾಲನಗರ ಪಪಂ ಅಧ್ಯಕ್ಷ ಬಿ.ಜೈವರ್ಧನ್, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್,
ಕಾಲೇಜು ಪ್ರಾಂಶುಪಾಲ ರಾಜಣ್ಣ, ಕಾವಲುಪಡೆ ರಾಜ್ಯ ಉಪಾಧ್ಯಕ್ಷ ರವಿಗೌಡ್ರು,  ಡಿವೈಎಸ್ಪಿ ಗಂಗಾಧರಪ್ಪ,
ಕುಶಾಲನಗರ ವಲಯ ಅರಣ್ಯಾಧಿಕಾರಿ ಶಿವರಾಂ, ತೋಟಗಾರಿಕೆ ಇಲಾಖೆಯ ಸಹಾಯಕ‌ ನಿರ್ದೇಶಕ ವರದರಾಜು, ಮಕ್ಕಳ ತಜ್ಞ ಮಡಿಕೇರಿಯ ಡಾ.ಮೋಜಿಮುಲ್ ಸಿದ್ದಿಕ್, ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರಾಣಿ, ಬಾರವಿ‌ ಕನ್ನಡ ಸಂಘದ ಬಬೀಂದ್ರ ಪ್ರಸಾದ್ ಸೇರಿದಂತೆ ಸಂಘಟನೆಯ ವಿವಿಧ ಘಟಕಗಳ ಪದಾಧಿಕಾರಿಗಳು ಇದ್ದರು.
ಕಾಲೇಜು ವಿದ್ಯಾರ್ಥಿಗಳ ತಂಡ‌ ನಾಡಗೀತೆ ಹಾಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!