ಕಾರ್ಯಕ್ರಮ

ವಿಶ್ವ ಶೌಚಾಲಯ ದಿನ: ಮುಳ್ಳುಸೋಗೆ ಗ್ರಾಪಂ ವತಿಯಿಂದ ಸ್ವಚ್ಛತಾ ಓಟ

ಕುಶಾಲನಗರ, ನ 19:  ವಿಶ್ವ ಶೌಚಾಲಯ ದಿನ ದ ಅಂಗವಾಗಿ ಮುಳ್ಳುಸೋಗೆ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಓಟ ಕಾರ್ಯಕ್ರಮವನ್ನು ಹಮ್ಮಿಕೊಂಡು ಗ್ರಾಮೀಣ ಭಾಗದ ಜನರಲ್ಲಿ ಸ್ವಚ್ಛತೆಯ ಅರಿವನ್ನು ಮೂಡಿಸಲಾಯಿತು ಸ್ವಚ್ಛತಾ ಓಟ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಚಾಲನೆಯನ್ನು ನೀಡಿದರು ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಳ್ಳುಸೋಗೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಮ್ಮನಕೊಲ್ಲಿ ಇಲ್ಲಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಪಾಲ್ಗೊಂಡಿದ್ದರು

ಸ್ವಚ್ಛತಾ ಓಟ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಹಾಗೂ ಮಕ್ಕಳಲ್ಲಿ ಶೌಚಾಲಯದ ಅವಶ್ಯಕತೆ ಬಳಕೆ ಹಾಗೂ ಸ್ವಚ್ಛತೆಯ ಅಗತ್ಯತೆಯನ್ನು ಮನದಟ್ಟು ಮಾಡಿಕೊಡಲಾಯಿತು

Related Articles

Leave a Reply

Your email address will not be published. Required fields are marked *

Back to top button
error: Content is protected !!