ಕುಶಾಲನಗರ, ನ 23: ಕೂಡಿಗೆ ಪದವಿಪೂರ್ವ ಕಾಲೇಜಿನ ಪೋಷಕರ ಸಭೆ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ. ಕೆ. ನಾಗರಾಜಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪದವಿಪೂರ್ವ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಿನ ಅಂಕಪಟ್ಟಿಗಳನ್ನು ಪರಿಶೀಲನೆ, ವಿದ್ಯಾರ್ಥಿಗಳ ಪ್ರಗತಿಯ ಪರಿಶೀಲನೆ ಸೇರಿದಂತೆ ಕಾಲೇಜು ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಬಗ್ಗೆ ಪೋಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಕಾಲೇಜು ಪ್ರಾಂಶುಪಾಲ ಡಾ. ಬಸಪ್ಪ ಕಾಲೇಜು ವಿದ್ಯಾರ್ಥಿಗಳ ಪ್ರಗತಿಗೆ ಪೋಷಕರ ಪಾತ್ರ ಮುಖ್ಯವಾಗಿರುತ್ತದೆ.ಪೋಷಕರು ವಿದ್ಯಾರ್ಥಿಗಳ ಚಲನ ವಲನಗಳ ಬಗ್ಗೆ ಗಮನ ಹರಿಸಿ ಶೈಕ್ಷಣಿಕ ಫಲಿತಾಂಶದ ಪ್ರಗತಿಗೆ ಸಹಕಾರವನ್ನು ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಎಂ. ಬಿ.ಮಹೇಶ್ ಸೇರಿದಂತೆ ಉಪನ್ಯಾಸಕ ವೃಂದದವರು ಹಾಜರಿದ್ದರು.
Back to top button
error: Content is protected !!