ಕುಶಾಲನಗರ, ನ 26: ಕೊಡಗು ಜಿಲ್ಲಾ ಯುವ ಜೆಡಿಎಸ್ ಆಶ್ರಯದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಕುಶಾಲನಗರದ ಖಾಸಗಿ ಸಭಾಂಗಣದಲ್ಲಿ ನಡೆಯಿತು.
ಇತರೆ ಪಕ್ಷಗಳನ್ನು ತೊರೆದು ಸುಮಾರು 250 ಕ್ಕೂ ಅಧಿಕ ಮಂದಿ ಯುವಕರು ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ಮಾತನಾಡಿ,
ಕೊಡಗಿನ ಸಮಸ್ಯೆಗಳು ಪರಿಹಾರ ಜೆಡಿಎಸ್‌ನಿಂದ ಮಾತ್ರ ಸಾಧ್ಯ.
ಕೊಡಗಿನಲ್ಲಿ ಉದ್ಯೋಗಾವಕಾಶ ಇಲ್ಲದೇ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ನಿರುದ್ಯೋಗ ಸಮಸ್ಯೆ ಪರಿಹರಿಸಲು ಕೃಷಿ ಅಥವಾ ಉತ್ಪಾದನಾ ವಲಯದಲ್ಲಿ ಉದ್ಯೋಗಾವಕಾಶ ಸೃಷ್ಟಿಸಬೇಕಿದೆ. ಯುವಸಮೂಹ ಅನುಭವಿಸುತ್ತಿರುವ ಸಂಕಷ್ಟ ಪರಿಹಾರಕ್ಕಾಗಿ ಜೆಡಿ(ಎಸ್)ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯುವಜನರ ಸಮಸ್ಯೆ ಪರಿಹಾರಕ್ಕೆ ಪರಿಹಾರ ಸೂತ್ರಗಳನ್ನು ಜಾರಿಗೆ ತರಲಾಗುವುದೆಂದರು. ಕೊಡಗಿನ ರಸ್ತೆಗಳು ತೀರಾ ದುಸ್ಥಿತಿಗೆ ತಲುಪಿದೆ. ರಸ್ತೆಗಳು ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಇದನ್ನು ಪ್ರತಿಯೊಬ್ಬರು ಪ್ರಶ್ನಿಸುವುದರ ಮೂಲಕ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಮಾಡಬೇಕು. ಕೊಡಗಿಗೆ ಅಗತ್ಯವಾಗಿ ಬೇಕಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಗಟ್ಟಿಧ್ವನಿ ಮೊಳಗಿಸಬೇಕಿದೆ ಎಂದರು.
ಯುವ ಜೆಡಿ(ಎಸ್) ಜಿಲ್ಲಾಧ್ಯಕ್ಷ ಸಿ.ಎಲ್ ವಿಶ್ವ ಮಾತನಾಡಿ, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಎಚ್.ಆರ್. ಸುರೇಶ್ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜೆಡಿ(ಎಸ್) ಕುಶಾಲನಗರ ತಾಲೂಕು ಅಧ್ಯಕ್ಷ ಪಿ.ಡಿ. ರವಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ತ್ರಿನೇಶ್, ತಾಲೂ ಸಂಘಟನಾ ಕಾರ್ಯದರ್ಶಿ ಲಿಂಗರಾಜ್, ಯುವ ಮುಖಂಡ ನವೀನ್, ಅಪ್ಪುಣು, ಆಸಿಫ್, ರವಿ ಮಾದಪ್ಪ ಮತ್ತಿತರರು ಇದ್ದರು.
Back to top button
error: Content is protected !!